ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹೆಜಮಾಡಿ : ಗಾಂಧಿ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

Posted On: 02-10-2021 02:43PM

ಹೆಜಮಾಡಿ : ಕಾಪು ತಾಲೂಕಿನ ಹೆಜಮಾಡಿ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಈ ಸಂದರ್ಭ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಾಣೇಶ್ ಹೆಜಮಾಡಿ ಮದ್ಯಮುಕ್ತ, ವ್ಯಸನ ಮುಕ್ತ, ತ್ಯಾಜ್ಯ ಮುಕ್ತ , ಸ್ವಚ್ಚ ಗ್ರಾಮವಾಗುವಲ್ಲಿ ಎಲ್ಲರೂ ಪಣ ತೊಡಗಬೇಕೆಂದು ವಿನಂತಿಸಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮತಿ, ಉಪಾಧ್ಯಕ್ಷೆ ಪವಿತ್ರಾ ಗಿರೀಶ್, ಗ್ರಾಮ ಪಂಚಾಯತ್ ಸದಸ್ಯರು, SLRM ಘಟಕದ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಂಚಾಯತ್ ಸಿಬ್ಬಂದಿಯವರು ಭಾಗವಹಿಸಿದ್ದರು. ಪೇಟೆಯಲ್ಲಿ ಕಸವನ್ನು ಹೆಕ್ಕುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.