ಕಾಪು: ಬಿಜೆಪಿ ಯುವಮೋರ್ಚಾ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜಿ ಯವರ 71ನೇ ಜನ್ಮದಿನದ ಪ್ರಯುಕ್ತ "ಸೇವೆ ಮತ್ತು ಸಮರ್ಪಣೆ" ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಮತ್ತು ಬಟ್ಟೆ ಚೀಲ ಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀ ಕಾಂತ್ ನಾಯಕ್, ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ ಕುಮಾರ್ ಮೂಡುಬೆಳ್ಳೆ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ್ ಕೃಷ್ಣರಾವ್, ನಿಕಟ ಪೂರ್ವ ಪುರಸಭಾ ಅಧ್ಯಕ್ಷರಾದ ಅನಿಲ್ ಕುಮಾರ್, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್, ಕಾರ್ಯದರ್ಶಿ ಸತೀಶ್ ಪೂಜಾರಿ ಉದ್ಯಾವರ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಅಡ್ವೆ, ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ ಉಪಸ್ಥಿತರಿದ್ದರು.