ಕಾಪು : ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ಕಟಪಾಡಿ ಎಸ್ ವಿ ಎಸ್ ಕಾಲೇಜಿನ ಬಳಿ ನಡೆಯಿತು. ಈ ಸಂದರ್ಭ ನೂರಾರು ವಿದ್ಯಾರ್ಥಿಗಳು ಸಂತೋಷದಿಂದ ಪತ್ರ ಬರೆದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಸಂತೋಷ ಕುಮಾರ್ ಮೂಡುಬೆಳ್ಳೆ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ್ ಕೃಷ್ಣ ರಾವ್, ಮಂಡಲ ಉಪಾಧ್ಯಕ್ಷರಾದ ಪವಿತ್ರ ಶೆಟ್ಟಿ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್, ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ಉದ್ಯಾವರ, ಅಭಿರಾಜ್ ಸುವರ್ಣ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಅಡ್ವೆ, ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಶಕ್ತಿಕೇಂದ್ರ ಪ್ರಮುಖ್ ಸಂತೋಷ್ ಕುಮಾರ್, ಅರುಣ್ ಆಚಾರ್ಯ ಉಪಸ್ಥಿತರಿದ್ದರು.