ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಅನ್ನಸಂತರ್ಪಣೆ ಪುನರಾರಂಭ

Posted On: 18-10-2021 08:43PM

ಕಟಪಾಡಿ: ಇಲ್ಲಿನ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಪ್ರತಿ ಸೋಮವಾರ ಹಾಗೂ ಶುಕ್ರವಾರಗಳಂದು ನಡೆಯುತ್ತಿದ್ದ ಅನ್ನಸಂತರ್ಪಣೆಯನ್ನು ಅ.18ರಿಂದ ಪುನರಾರಂಭಿಸಲಾಗುತ್ತಿದೆ.

ಮುಂದಿನ ದಿನಗಳಲ್ಲಿ ಪ್ರತಿ ಸೋಮವಾರ ಮತ್ತು ಶುಕ್ರವಾರ ಈ ಸೇವೆ ನಿರಂತರವಾಗಿ ನಡೆಯಲಿದೆ.