ಶಿರ್ವ: ಕಾಪು-ಶಿರ್ವ ರಸ್ತೆಯ ಶಾಂತಿಗುಡ್ಡೆ ಎಂಬಲ್ಲಿ ಸಾರ್ವಜನಿಕರು ಘನ ಮತ್ತು ದ್ರವ ತ್ಯಾಜ್ಯಗಳು ಹಾಗು ಪ್ಲಾಸ್ಟಿಕ್ ವಸ್ತುಗಳನ್ನು ಮನ ಬಂದಂತೆ ರಸ್ತೆ ಬದಿಗೆ ಎಸೆಯುವುದರಿಂದ ಪರಿಸರದ ದನಕರುಗಳಿಗೆ ಮತ್ತು ಜನರಿಗೆ ತೊಂದರೆ ಉಂಟಾಗುವ ಬಗ್ಗೆ ಶಿರ್ವದ ಸಂತ ಮೇರಿ ಕಾಲೇಜಿನ ಉಪನ್ಯಾಸಕರಾದ
ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ನಮ್ಮ ಕಾಪು ವೆಬ್ ಪೋರ್ಟಲ್ ತಿಳಿಸಿದ ಹಿನ್ನೆಲೆಯಲ್ಲಿ ತಕ್ಷಣ ಸ್ಪಂದಿಸಿದ ಶಿರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ ಆರ್ ಪಾಟ್ಕರ್ ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.