ಕಾಪು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಉಂಡಾರುವಿನಲ್ಲಿ ಇನ್ನಂಜೆ ಯುವತಿ ಮಂಡಲದ ವತಿಯಿಂದ ಇಂದು ಸಂಜೆ ಹೂವಿನ ಪೂಜೆ ನಡೆಯಿತು.
ಕ್ಷೇತ್ರದ ಅರ್ಚಕರಾದ ಶ್ರವಣ್ ಭಟ್ ಇನ್ನಂಜೆಯಲ್ಲಿ ಇನ್ನಷ್ಟು ಒಳ್ಳೆಯ ಕೆಲಸಗಳನ್ನು ಮಾಡಲು ಶ್ರೀ ದೇವರ ಅನುಗ್ರಹ ನಿಮ್ಮ ಸಂಸ್ಥೆಯ ಮೇಲಿರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಯುವತಿ ಮಂಡಲದ ಅಧ್ಯಕ್ಷೆ ಆಶಾ ನಾಯಕ್ ಇನ್ನಂಜೆ, ಸ್ಥಳೀಯ ಗ್ರಾ. ಪಂ ಸದಸ್ಯ ನಿತೇಶ್ ಸಾಲ್ಯಾನ್ ಕಲ್ಯಾಲು, ಇನ್ನಂಜೆ ಯುವಕ ಮಂಡಲದ ಅಧ್ಯಕ್ಷ ಉಮೇಶ್ ಆಚಾರ್ಯ, ಮಾಜಿ ಅಧ್ಯಕ್ಷ ಮಧುಸೂದನ್ ಆಚಾರ್ಯ, ಕಾರ್ಯದರ್ಶಿ ಹರೀಶ್ ಪೂಜಾರಿ,ಸ್ಥಾಪಕಧ್ಯಕ್ಷೆ ಸುಮಲತಾ ಇನ್ನಂಜೆ, ಇನ್ನಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮಣ್ ಶೆಟ್ಟಿ ಮಂಡೇಡಿ, ಯುವತಿ ಮಂಡಲದ ಭಜನಾ ಗುರುಗಳು ಶ್ರೀಕಾಂತ್ ಪ್ರಭು ಪಳ್ಳಿ, ಶ್ರೀ ಜನಾರ್ದನ ಚೆಂಡೆ ಬಳಗ ಎರ್ಮಾಳ್, ಯುವತಿ ಮಂಡಲದ ಗೌರವ ಸಲಹೆಗಾರರಾದ ಶ್ವೇತಾ ಎಲ್.ಶೆಟ್ಟಿ, ಕಾರ್ಯದರ್ಶಿ ಲಕ್ಷ್ಮೀ ವೈ ನಾಯಕ್, ಹಾಗೂ ಪದಾಧಿಕಾರಿಗಳು, ಸದಸ್ಯರು, ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.