ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉದ್ಯಾವರ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಗೀತ ಗಾಯನ

Posted On: 28-10-2021 10:55PM

ಕಟಪಾಡಿ :ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡದ ಅಭಿಮಾವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಉದ್ಯಾವರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಶ್ರೀಯಾನ್ ಕನ್ನಡ ಧ್ವಜ ನೀಡುವ ಮೂಲಕ ಚಾಲನೆ ನೀಡಲಾಯಿತು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಂತೋಷ್ ಸುವರ್ಣ ಬೊಲ್ಜೆ ಪ್ರತಿಜ್ಞಾ ವಿಧಿಬೋಧಿಸಿದರು. ವಿದ್ಯಾರ್ಥಿಗಳು ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡುಗಳ ಗಾಯನ ನಡೆಯಿತು.

ಈ ಸಂದರ್ಭ ಮುಖ್ಯ ಶಿಕ್ಷಕಿ ಮೂಕಾಂಬೆ, ಪ್ರಾಂಶುಪಾಲೆ ರಶ್ಮಿ, ಸಿಬಿಸಿ ಉಪಾಧ್ಯಕ್ಷ ವಿಜಯ್ ಕುಮಾರ್ ಉದ್ಯಾವರ, ಪ್ರಮುಖರಾದ ಯೋಗೀಶ್ ಕೋಟ್ಯಾನ್, ಪ್ರತಾಪ್ ಕುಮಾರ್, ಪೂರ್ಣಿಮಾ, ಗುರುಚಂದ್ರ, ಗ್ರಾಮ ಪಂಚಾಯತ್ ಸದಸ್ಯರಾದ ಸಚಿನ್ ಸುವರ್ಣ ಪಿತ್ರೋಡಿ, ರಾಜೇಶ್ ಕುಂದರ್, ಸರೋಜ, ಪ್ರಮೀಳಾ, ವನಿತಾ ಶೆಟ್ಟಿ, ರಮಾನಂದ ಶೇರಿಗಾರ್, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.