ಕಾಪು : ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಕುತ್ಯಾರು, ಉಡುಪಿ ಮತ್ತು ರೋಟರಿ ಕ್ಲಬ್ ಶಿರ್ವ ಇವರ ಸಹಯೋಗದೊಂದಿಗೆ ನವೆಂಬರ್ 12, ಶುಕ್ರವಾರ ಅಪರಾಹ್ನ 2:15ಕ್ಕೆ ಸೂರ್ಯ ಚೈತನ್ಯ ಸಭಾಭವನದಲ್ಲಿ ಹದಿಹರೆಯದ ತಲ್ಲಣಗಳು: ಒಂದು ಶೈಕ್ಷಣಿಕ ಸಂವಾದ ಕಾರ್ಯಕ್ರಮ ಜರಗಲಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಸ್ನಾತಕೋತ್ತರ ಅಧ್ಯಯನ ವಿಭಾಗದ ಡೀನ್ , ಸಹಪ್ರಾಧ್ಯಾಪಕರು-ಸೈಕಾಲಜಿ ಹಾಗೂ ಸೈಕಿಯಾಟ್ರಿ ವಿಭಾಗ, ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಮೂಡುಬಿದಿರೆಯ ಡಾ. ರವಿಪ್ರಸಾದ್ ಹೆಗ್ಡೆ, ಮುಖ್ಯ ಅತಿಥಿಯಾಗಿ ಉಡುಪಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ನಾಗೇಂದ್ರಪ್ಪ ಎ. ಕೆ, ರೋಟರಿ ಕ್ಲಬ್ ಶಿರ್ವದ ಅಧ್ಯಕ್ಷರಾದ ಜಯಕೃಷ್ಣ ಆಳ್ವ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ-ಕುತ್ಯಾರು ಇಲ್ಲಿನ ಆಡಳಿತ ಮಂಡಳಿ ಅಧ್ಯಕ್ಷರಾದ ವಿದ್ವಾನ್ ಶಂಭುದಾಸ ಗುರೂಜಿ ವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.