ಕಾಪು : ಜಿಲ್ಲಾ ಪಂಚಾಯತ್ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಛೇರಿ ಎನ್.ಪಿ.ಡಿ.ಘಟಕ ಉಡುಪಿ, ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್, ಮಾಹೆ, ಮಣಿಪಾಲ, ಪ್ರಾಥಮಿಕ ಆರೋಗ್ಯ ಕೇಂದ್ರ, ಕಾಪು, ರೋಟರಿ ಕ್ಲಬ್ ಶಂಕರಪುರ ಮತ್ತು ರೋಟರಿ ಸಮುದಾಯ ದಳ ಇನ್ನಂಜೆ ಇವರ ಸಹಭಾಗಿತ್ವದಲ್ಲಿ
ಕ್ಯಾನ್ಸರ್ ಅರಿವು ಕಾರ್ಯಕ್ರಮ ಮತ್ತು ತಪಾಸಣಾ ಶಿಬಿರ ಇಂದು ಇನ್ನಂಜೆ ಪಂಚಾಯತ್ ಬಳಿಯ ದಾಸಭವನದಲ್ಲಿ ಜರಗಿತು.
ರೋಟರಿ ಶಂಕರಪುರ ಅಧ್ಯಕ್ಷೆ ಫ್ಲೇವಿಯ ಮೆನೆಝಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇನ್ನಂಜೆ ಗ್ರಾ. ಪಂ ಅಧ್ಯಕ್ಷೆ ಮಲ್ಲಿಕಾ ಆಚಾರ್ಯ, ಜಿಲ್ಲಾ ಸರ್ವೇಕ್ಷಣಧಿಕಾರಿ ಡಾ| ನಾಗರತ್ನ, ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್, ಮಾಹೇ, ಮಣಿಪಾಲ ಡಾ| ಆರತಿ ರಾವ್, ಕೆ ಎಂ ಸಿ ಮುಖ್ಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರಾದ ಡಾ| ಶ್ಯಾಮಲಾ, ರೋಟರಿ ಸಮುದಾಯ ದಳ ಇನ್ನಂಜೆ ಇದರ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಎಸ್.ವಿ. ಎಸ್ ಸಮೂಹ ಸಂಸ್ಥೆಗಳ ಪ್ರಾಂಶುಪಾಲರಾದ ಪುಂಡರಿಕಾಕ್ಷ ಕೊಡಂಚ, ಮಾಲಿನಿ ಇನ್ನಂಜೆ, ಜಿಲ್ಲಾ ಆಸ್ಪತ್ರೆ ಉಡುಪಿ ಎನ್ ಸಿ ಡಿ ಘಟಕದ ವೈದ್ಯ ಡಾ| ರಾಯಚಂದ್ರ, ಡಾ| ಅಂಜಲಿ, ಕಾಪು ಪ್ರಾಥಮಿಕ ಅರೋಗ್ಯ ಕೇಂದ್ರದ ಸುರಕ್ಷಾ ಅಧಿಕಾರಿ ನಿರ್ಮಲ, ಆಶಾ ಕಾರ್ಯಕರ್ತೆಯರು, ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಮತ್ತು ಎಸ್ ವಿ ಎಸ್ ಇನ್ನಂಜೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.