ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಯೂತ್ ಫಾರ್ ಸೇವಾ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಣೂರು ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ಮತ್ತು ಲೇಖನ ಪರಿಕರ ವಿತರಣೆ

Posted On: 12-11-2021 04:33PM

ಕಾರ್ಕಳ : ಸಾಣೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಯೂತ್ ಫಾರ್ ಸೇವಾ ವತಿಯಿಂದ ಶಾಲೆಯ 6 ನೇ ಮತ್ತು 7ನೇ ತರಗತಿಯ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ಮತ್ತು ಲೇಖನ ಪರಿಕರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಷಾ ತಮಂಕರ್ ಅವರು ವಹಿಸಿದ್ದರು . ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಪದಾಧಿಕಾರಿಗಳು ಆಗಿರುವ ಸಮಾಜ ಸೇವಕಿ ರಮಿತಾ ಶೈಲೇಂದ್ರ, ಗಣೇಶ್ ಸಾಲ್ಯಾನ್, ಸಾಣೂರು ಗ್ರಾಮ ಪಂಚಾಯತ್ ಸದಸ್ಯರಾಗಿರುವ ಕರುಣಾಕರ ಕೋಟ್ಯಾನ್, ಕಾರ್ಕಳ ಶಿಕ್ಷಣ ಇಲಾಖೆಯ ಬಿ. ಆರ್. ಪಿ. ಸಂತೋಷ್ ಶೆಟ್ಟಿ, ಎಸ್ಡಿಎಂಸಿ ಅಧ್ಯಕ್ಷೆ ಜಯಶ್ರೀ ದೇವಾಡಿಗ, ನಿಕಟಪೂರ್ವ ಅಧ್ಯಕ್ಷ ಸೋಮನಾಥ ಮತ್ತು ಶಿಕ್ಷಕ ವೃಂದ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ದ್ಯೇಯಗಳಲ್ಲಿ ಒಂದಾದ ಸಮಾಜಸೇವೆ ಮಾಡುವ ಮನೋಭಾವನೆಯನ್ನು ಬೆಳೆಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಶಾಲೆಯ ಹಿರಿಯ ಶಿಕ್ಷಕಿ ನಿರ್ಮಲ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.