ನವೆಂಬರ್ 27, ಕನ್ನಡ ಜಾನಪದ ಪರಿಷತ್ ಮತ್ತು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ ಆಶ್ರಯದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ-2021
Posted On:
26-11-2021 05:37PM
ಕಾಪು : ಕನ್ನಡ ಜಾನಪದ ಪರಿಷತ್ ಬೆಂಗಳೂರು,
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಘಟಕ, ಕನ್ನಡ ಜಾನಪದ ಪರಿಷತ್ ಕಾಪು ತಾಲೂಕು ಘಟಕ ಮತ್ತು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ-2021
ನವೆಂಬರ್ 27ರಂದು ಮಧ್ಯಾಹ್ನ 3 ಗಂಟೆಗೆ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ ಇಲ್ಲಿ ಜರಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾರ್ಯದರ್ಶಿ ರತ್ನಕುಮಾರ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಶ್ರೀಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲರಾದ ಡಾ.ತಿರುಮಲೇಶ್ವರ ಭಟ್ ವಹಿಸಲಿದ್ದು, ಅತಿಥಿಯಾಗಿ ಕನ್ನಡ ಜಾನಪದ ಪರಿಷತ್ ಉಡುಪಿಯ ಜಿಲ್ಲಾಧ್ಯಕ್ಷರಾದ ಡಾ. ಗಣೇಶ್‌ಕುಮಾರ್ ಗಂಗೊಳ್ಳಿ ಭಾಗವಹಿಸಲಿದ್ದಾರೆ.
ಈ ಸಂದರ್ಭ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಚಾಣಕ್ಯ ಪ್ರಶಸ್ತಿ ವಿಜೇತ ಮಾಸ್ಟರ್ ಯಶಸ್ ಪಿ.ಸುವರ್ಣ ಕಟಪಾಡಿ ಅವರಿ೦ದ ಕೊಳಲುವಾದನವು ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.