ಉಡುಪಿ ಶ್ರೀ ಕೃಷ್ಣ ಮಠ ಭೇಟಿ ; ಅದಮಾರು ಮಠಾಧೀಶರಿಂದ ಪರ್ಯಾಯ ಮಂಗಲೋತ್ಸವದ ಆಮಂತ್ರಣ ಪತ್ರಿಕೆ ಸ್ವೀಕರಿಸಿದ ರಾಜ್ಯಪಾಲರು
Posted On:
03-12-2021 08:57PM
ಉಡುಪಿ : ಕರ್ನಾಟಕ ಸರ್ಕಾರದ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಇವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.
ಈ ಸಂದರ್ಭ ಅದಮಾರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿ ಪರ್ಯಾಯ ಮಂಗಲೋತ್ಸವದ ಆಮಂತ್ರಣ ಪತ್ರಿಕೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಶ್ರೀ ಕೃಷ್ಣಾಸೇವಾ ಬಳಗದ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು.