ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಾರಿಕೆರೆ ಕೊರಗ ಕಾಲೋನಿಗೆ ಗೃಹ ಸಚಿವರ ಭೇಟಿ

Posted On: 01-01-2022 07:59PM

ಉಡುಪಿ : ಬ್ರಹ್ಮಾವರ ತಾಲೂಕು ಕೋಟತಟ್ಟುವಿನ ಕೊರಗ ಕಾಲೋನಿಯಲ್ಲಿ ಮೆಹಂದಿ ಕಾರ್ಯಕ್ರಮದ ಸಂದರ್ಭದಲ್ಲಿ ಕೊರಗರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಘಟನೆಯ ಕುರಿತಂತೆ ,ಇಂದು ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಈ ಘಟನೆಯ ತನಿಖೆಯನ್ನು ಸಿ.ಓ.ಡಿ ಗೆ ವಹಿಸುವುದಾಗಿ ತಿಳಿಸಿದರು.

ಇದೇ ವೇಳೆ ಲಾಠಿಚಾರ್ಜ್ ನಿಂದ ಗಾಯಗೊಂಡ 6 ಜನರಿಗೆ 2 ಲಕ್ಷ ರೂ ಗಳ ಪರಿಹಾರವನ್ನು ಘೋಷಣೆ ಮಾಡಿ, ಅದರಲ್ಲಿ ಮೊದಲ ಹಂತದ ಪರಿಹಾರವಾಗಿ 50000 ರೂ ಗಳ ಚೆಕ್ ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಎಸ್ಪಿ ವಿಷ್ಣುವರ್ಧನ್, ಕೊರಗ ಸಮುದಾಯದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.