ಪಡುಬಿದ್ರಿ : ಫಲಿಮಾರು ವ್ಯಾಪ್ತಿಯ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅವರಾಲು, ಅಡ್ಕ ಇವರ ವತಿಯಿಂದ 11ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಜನವರಿ 14, ಶುಕ್ರವಾರ ಜರಗಲಿದೆ.
ಅಂದು ಬೆಳಿಗ್ಗೆ 6.30ರಿಂದ ಸ್ಥಳ ಶುದ್ಧಿ, ಕಲಶ ಪ್ರತಿಷ್ಠೆ ಸಹಸ್ರ ನಾಮಾರ್ಚನೆ, ಗಣಹೋಮ, ಬೆಳಿಗ್ಗೆ 9ಕ್ಕೆ
ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭ ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಮಧ್ಯಾಹ್ನ 12.30 ರಿಂದ
ದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ 1ರಿಂದ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.