ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ

Posted On: 13-01-2022 06:29PM

ಶಿರ್ವ: ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ(ಗ್ಲೋಟಚ್ ಟೆಕ್ನಾಲಜೀಸ್) ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವೂ ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್),ಬಿಇ(ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ(ಸಿಎಸ್),ಎಂಎಸ್ಸಿ (ಸಿಎಸ್), ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ,ವೃತ್ತಿ ಸಮಾಲೋಚನೆ ಮತ್ತು ನಿಯೋಜನೆ ಕೋಶ ವತಿಯಿಂದ ಜನವರಿ 13 ರಂದು ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ನಡೆಯಿತು.

ಇದು ಸ್ಪರ್ಧಾತ್ಮಕ ಯುಗ ಎಂದು ತಿಳಿದಿದೆ ಶಿಕ್ಷಣದ ಜೊತೆಗೆ ಪ್ರತಿಯೊಬ್ಬ ಅಭ್ಯರ್ಥಿಯು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾಗಿರುವ ಕೌಶಲಗಳನ್ನು ಕಲಿತು ಉದ್ಯೋಗವನ್ನು ಪಡೆಯಲು ಹಾಗೂ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದು ದಿಯ ಸಿಸ್ಟಮ್ಸ್ ಮ್ಯಾನೇಜರ್ ಎಚ್.ಆರ್ ಶ್ರೀ ಎಬಿನೇಜರ್ ರಾಜಾರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ | ಹೆರಾಲ್ಡ್ ಐವನ್ ಮೋನಿಸ್ ರವರು ಇಂದು ಸಂವಹನ ಕೌಶಲ್ಯಗಳ ಮಹತ್ವವನ್ನು ಅಭ್ಯರ್ಥಿಗಳು ಅರಿತುಕೊಂಡು ಇಂತಹ ಸಂದರ್ಶನಕ್ಕೆ ಭಾಗವಹಿಸಿ ಉದ್ಯೋಗ ಪಡೆಯಬೇಕು ಎಂದು ಶುಭ ಹಾರೈಸಿದರು. ಇಂದಿನ ಕಾಲದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಳು ಲಭ್ಯವಿದ್ದು ಅದರ ಮಾಹಿತಿಯನ್ನು ಸೂಕ್ತವಾಗಿ ಪಡೆದು - ಸೂಕ್ತ ತಯಾರಿಕೆಯನ್ನು ಮಾಡಿಕೊಂಡು ಇಂತಹ ಸಂದರ್ಶನಗಳಲ್ಲಿ ಭಾಗವಹಿಸಿ ಉದ್ಯೋಗ ಪಡೆಯಬೇಕಾಗಿದೆ ಎಂದು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ನಿರ್ದೇಶಕ ಶ್ರೀ ಲೆಫ್ಟಿನೆಂಟ್ ಪ್ರವೀಣ್ ಕುಮಾರ್ ಅವರು ಮಾಹಿತಿ ನೀಡಿ ಪ್ರಸ್ತಾವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ದಿಯಾ ಸಿಸ್ಟಮ್ ಸಂಸ್ಥೆಯ ಸೀನಿಯರ್ ಅನಲಿಸ್ಟ್ ಎಚ್.ಆರ್ ಶೀತಲ್ ಭಂಡಾರಿ, ಅನಲಿಸ್ಟ್ ಎಚ್.ಆರ್ ಸುರೇಶ್, ತನುಜ ಎನ್ ಸುವರ್ಣ, ಉಪನ್ಯಾಸಕರಾದ ಸುಷ್ಮಾ, ಪ್ರಕಾಶ್ ಅಭ್ಯರ್ಥಿಗಳು ಹಾಗೂ ವಿದ್ಯಾರ್ಥಿಗಳು ಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳಾದ ಅಕ್ಷಯ್, ದೀಕ್ಷಾ ಪಿಜಿ, ದ್ಯುತಿಶ್ರೀ, ಹಾರ್ದಿಕ್ ಸಾಲಿಯಾನ್, ಸನತ್ ಕುಮಾರ್ ಶೆಟ್ಟಿ ಸಹಕರಿಸಿದರು. ದೀಪಿಕಾ ಮತ್ತು ಬಳಗ ಪ್ರಾರ್ಥಿಸಿ, ಪ್ರಿಯಾಂಕ ಸ್ವಾಗತಿಸಿ, ಸುರೇಖಾ ಕಾರ್ಯಕ್ರಮ ನಿರೂಪಿಸಿದರು. ರಮಿಜಿಯಾ ವಂದಿಸಿದರು.