ಉಡುಪಿ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ರಾತ್ರಿ 7ರವರೆಗೆ ಲಾಕ್ಡೌನ್ ಸಡಿಲಿಕೆ – ಶಾಸಕ ರಘುಪತಿ ಭಟ್
ಉಡುಪಿ : ಕೋವಿಡ್-19 ನಿಯಂತ್ರಣದ ಹಿನ್ನೆಲೆಯಲ್ಲಿ ವಿಧಿಸಲ್ಪಟ್ಟ ಲಾಕ್ಡೌನ್ ಮೇ 17ರವರೆಗೆ ಮುಂದುವರಿದಿದ್ದು ಉಡುಪಿ ಜಿಲ್ಲೆಯಲ್ಲಿ ಮೇ 5ರಿಂದ ಬೆಳಗ್ಗೆ 7ರಿಂದ ರಾತ್ರಿ 7ರವರೆಗೆ ಲಾಕ್ಡೌನ್ ಸಡಿಲಿಸಲಾಗಿದೆ. ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ಲಾಕ್ಡೌನ್ ಮುಂದುವರಿಯಲಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರ ಜೊತೆ ಸಭೆ ನಡೆಸಿ ಉಡುಪಿಯಲ್ಲಿ ಲಾಕ್ ಡೌನ್ ಸಡಿಲಿಕೆ ವಿಚಾರದಲ್ಲಿ ಚರ್ಚೆ ನಡೆಸಲಾಗಿತ್ತು ಅದರಂತೆ ಮೇ 4 ರಿಂದ ಬೆಳಿಗ್ಗೆ 7 ಗಂಟೆಯಿಂದ 1 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ ಇಂದು ಬೆಳಿಗ್ಗೆ ನಗರದಲ್ಲಿನ ಜನದಟ್ಟಣೆಯನ್ನು ಗಮನಿಸಿ ಜಿಲ್ಲೆಯ ಎಲ್ಲಾ ಶಾಸಕರ ಜೊತೆ ಚರ್ಚೆ ನಡೆಸಿದ ಬಳಿಕ ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ಬೆಳಗ್ಗೆ 7ರಿಂದ ರಾತ್ರಿ 7ರವರೆಗೆ ಲಾಕ್ಡೌನ್ ಸಡಿಲಿಸಲಾಗಿದೆ ಎಂದರು. ಉಡುಪಿಯಲ್ಲಿ ನಾಳೆಯಿಂದ ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ಅಂಗಡಿ ಮುಂಗಟ್ಟುಗಳು ತೆರೆಯಲು ಅವಕಾಶ ನೀಡಲಾಗಿದೆ ಅಲ್ಲದೆ ವೈನ್ ಶಾಪ್ಗಳು ಕೂಡ ಬೆಳಿಗ್ಗೆ 9 ರಿಂದ ಸಂಜೆ 7ರ ವರೆಗೆ ಕಾರ್ಯ ನಿರ್ವಹಿಸಲಿದೆ