ಬಿರುವೆರ್ ಕಾಪು ಸೇವಾ ಸಮಿತಿ ಉದ್ಘಾಟನೆ, ಸಮ್ಮಾನ ಸಮಾರಂಭ, ಸಹಾಯ ಹಸ್ತಾಂತರ
Posted On:
28-01-2022 10:26PM
ಮೂಳೂರು : ನಾರಾಯಣಗುರುಗಳ ತತ್ವಾದರ್ಶಗಳು ಅಜರಾಮರ. ಅವುಗಳನ್ನು ಸಂಘ ಸಂಸ್ಥೆಗಳು ಪ್ರಚುರಪಡಿಸಬೇಕಾದ ಅನಿವಾರ್ಯತೆಯಿದೆ. ಬಿರುವೆರ್ ಕಾಪು ಸೇವಾ ಸಮಿತಿಯು ಸಮಾಜಮುಖಿ ಚಿಂತನೆಯ ಕಾರ್ಯಕ್ರಮಗಳು ನಿರಂತರವಾಗಿರಲಿ ಎಂದು ಕೇರಳ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಹೇಳಿದರು.
ಅವರು ಮೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಜರಗಿದ ಬಿರುವೆರ್ ಕಾಪು ಸೇವಾ ಸಮಿತಿಯ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಮೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಸುಭಾಶ್ಚಂದ್ರ ಪೂಜಾರಿ ರಾಜಮನೆ ಮೂಳೂರು ಬಿರುವೆರ್ ಕಾಪು ಸೇವಾ ಸಮಿತಿಯನ್ನು ಉದ್ಘಾಟಿಸಿದರು.
ಬಿರುವೆರ್ ಕಾಪು ಸೇವಾ ಸಮಿತಿಯ ಸನ್ಮಾನ ಸ್ವೀಕರಿಸಿ ಮಾತನಾಡಿದ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ದುಂದು ವೆಚ್ಚಗಳಿಗಳಿಗೆ ಕಡಿವಾಣ ಹಾಕಿ ಅದರಿಂದ ಉಳಿಸಿದ ಹಣವನ್ನು ಸಮಾಜಕಾರ್ಯಗಳಿಗೆ ಉಪಯೋಗಿಸುವ ಬಗ್ಗೆ ಚಿಂತಿಸಬೇಕಾಗಿದೆ. ಸಂಘಟನೆಗಳ ಮೂಲಕ ನಮ್ಮ ಸಂಸ್ಕೃತಿ, ಆಚರಣೆಗಳ ಬಗೆಗೂ ಬೆಳಕು ಚೆಲ್ಲುವ ಅನಿವಾರ್ಯತೆಯಿದೆ ಎಂದರು.
ವಕೀಲರಾದ ಸಂಕಪ್ಪ ಅಮೀನ್ ಮಾತನಾಡಿ ಸಂಘ ಸಂಸ್ಥೆಗಳು ಶಾಶ್ವತ. ಸಂಘಟನೆಗಳು ನಿಂತ ನೀರಾಗದೆ ಹರಿಯುವಂತಾಗಬೇಕು ಆಗ ಮಾತ್ರ ಅದರ ಉದ್ದೇಶ ಈಡೇರಿದಂತೆ ಎಂದರು.
ಸಮ್ಮಾನ : 2021ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಡುಪಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಉಡುಪಿಯ ವಕೀಲರಾದ ಸಂಕಪ್ಪ ಅಮೀನ್, ಕಾಪುವಿನ ವೃತ್ತ ನಿರೀಕ್ಷಕರಾದ ಪ್ರಕಾಶ್ ರನ್ನು ಸನ್ಮಾನಿಸಲಾಯಿತು.
ಸಹಾಯ ಹಸ್ತ : ಆರೋಗ್ಯ, ಮನೆ ನಿರ್ಮಾಣ ಇತ್ಯಾದಿ ಫಲಾನುಭವಿಗಳಿಗೆ ಒಟ್ಟು 60 ಸಾವಿರ ರೂಪಾಯಿ ಸಹಾಯ ಧನ ಹಸ್ತಾಂತರಿಸಲಾಯಿತು.
ಇದೆ ಸಂರ್ಭದಲ್ಲಿ ಕೇರಳ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯನ್ನು ಮೂಳೂರು ಬಿಲ್ಲವ ಸಂಘದ ವತಿಯಿಂದ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿರುವೆರ್ ಕಾಪು ಸೇವಾ ಸಮಿತಿಯ ಉಪಾಧ್ಯಕ್ಷರಾದ ಗಣೇಶ್ ಕೋಟ್ಯಾನ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅಧ್ಯಕ್ಷರಾದ ಪ್ರಭಾಕರ್ ಎಸ್ ಪೂಜಾರಿ, ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಮುಂಬಯಿ ಸಮಿತಿ ಅಧ್ಯಕ್ಷ ಎನ್.ಜಿ. ಪೂಜಾರಿ, ಬಿರುವೆರ್ ಕಾಪು ಸೇವಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಬಿರುವೆರ್ ಕಾಪು ಸೇವಾ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಪುರುಷೋತ್ತಮ ಸಾಲ್ಯಾನ್ ಸ್ವಾಗತಿಸಿದರು. ಪತ್ರಕರ್ತ ರಾಕೇಶ್ ಕುಂಜೂರು ಪ್ರಸ್ತಾವಿಸಿದರು. ಜೊತೆ ಕಾರ್ಯದರ್ಶಿ ಅತಿಥ್ ಸುವರ್ಣ ಪಾಲಮೆ ನಿರೂಪಿಸಿದರು. ಕಾರ್ಯದರ್ಶಿ ವಿಕ್ಕಿ ಪೂಜಾರಿ ಮಡುಂಬು ವಂದಿಸಿದರು.