ಮಂಗಳೂರು : ಇಲ್ಲಿನ ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭ ವು ಜನವರಿ 27ರಂದು ಜರಗಿತು.
ದೇವಾಲಯ ನಿರ್ಮಾಣಕ್ಕೆ ಜಿಲ್ಲಾ ಕುಲಾಲ ಸಂಘದ ನೇತೃತ್ವದಲ್ಲಿ, ದೇವಸ್ಥಾನದ ಆಡಳಿತ ಮಂಡಳಿ, ಜಿರ್ಣೋದ್ದಾರ ಸಮಿತಿ ಹಾಗು ಸಮಸ್ತ ಕುಲಾಲ ಸಮಾಜ ಹಾಗು ಸರ್ವ ಭಕ್ತಾದಿಗಳ ಸಹಭಾಗಿತ್ವದಲ್ಲಿ, ಮಾಣಿಲ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ, ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ಸ್ವಾಮೀಜಿಗಳ ದಿವ್ಯಾಸ್ತದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಪೂರ್ಣಗೊಂಡಿತು.
ಈ ಸಂದರ್ಭದಲ್ಲಿ ಕುಲಾಲ ಸಮಾಜದ ಗಣ್ಯರು, ಸಮಾಜ ಬಾಂಧವರು ಉಪಸ್ಥಿತರಿದ್ದರು.