ಹೆಜಮಾಡಿ : ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಉಡುಪಿ ಮತ್ತು ಗ್ರಾಮ ಪಂಚಾಯತ್, ಹೆಜಮಾಡಿ, ಕರಾವಳಿ ಯುವಕ-ಯುವತಿ ವೃಂದ (ರಿ.) ಹೆಜಮಾಡಿ, ವಿಜಯಾ ಕಾಲೇಜು, ಮುಲ್ಕಿ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಎನ್‌ಸಿಸಿ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ, ಯೂತ್ ರೆಡ್ ಕ್ರಾಸ್ ಘಟಕ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹೆಜಮಾಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ಹಾಗೂ ಯುವ ಜನತೆಗೆ ಜಲ ಜಾಗೃತಿ ಅಭಿಯಾನದ ತರಬೇತಿ ಕಾರ್ಯಕ್ರಮ ಜನವರಿ 30, ಆದಿತ್ಯವಾರ ಬೆಳಿಗ್ಗೆ ಗಂಟೆ 9ಕ್ಕೆ ಹೆಜಮಾಡಿಯ ಅಮಾವಾಸ್ಯೆ ಕರಿಯ ಕಡಲ ಕಿನಾರೆಯಲ್ಲಿ ಜರಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್. ಮೆಂಡನ್ ಮಾಡಲಿದ್ದು, ಅಭಿಯಾನಕ್ಕೆ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಚಾಲನೆ ನೀಡಲಿದ್ದಾರೆ.
ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ರಾಜ್ಯ ಸಂಪನ್ಮೂಲ ವ್ಯಕ್ತಿ ಮತ್ತು ತರಬೇತುದಾರಾದ ಜೋಸಫ್ ಜಿ. ಎಮ್ ರಬೆಲ್ಲೊ, ವಿವಿಧ ಕ್ಷೇತ್ರದ ಗಣ್ಯರು, ರಾಜಕೀಯ ಮುಖಂಡರು, ಸಂಘಸಂಸ್ಥೆಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.