ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ : ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ, ಜಾಗೃತಿ

Posted On: 31-01-2022 05:41PM

ಶಿರ್ವ:ಪ್ರಸ್ತುತ ದಿನದಿಂದ ದಿನಕ್ಕೆ ಉದ್ಯೋಗಕ್ಕಾಗಿ ಪೈಪೋಟಿ ಹೆಚ್ಚುತ್ತಿದ್ದು, ನಿವೇಶನ ನೀಡುವುದು ಸವಾಲಿನ ಕೆಲಸವಾಗಿ ಪರಿಣಮಿಸಿದೆ. ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಜೊತೆಗೆ ಹಳೆದು ಉನ್ನತ ಉದ್ಯೋಗಗಳಿಗೆ ಸಜ್ಜುಗೊಳಿಸುವುದುರಲ್ಲಿ ತರಬೇತಿ ಮತ್ತು ಜೀವನದ ವಿವಿಧ ಕೌಶಲ್ಯಗಳ ಸರಿಯಾದ ಮಾಹಿತಿ,ಮಾರ್ಗದರ್ಶನ ನೀಡುವುದರಲ್ಲಿ ಸಂಸ್ಥೆಯ ಜೊತೆಗೆ ಹೆತ್ತವರು ಹಾಗೂ ಪೋಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಹಾಗೂ ಮಿಜಾರು ಮೈಟ್ ಕಾಲೇಜಿನ ಒಡಂಬಡಿಕೆ ಅನ್ವಯ ಏರ್ಪಡಿಸಿದ ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ, ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಿಜಾರು ಕಾಲೇಜಿನ ಪ್ರಾಧ್ಯಾಪಕ ಪ್ರೊ. ಜಯದೇವ ಪ್ರಸಾದ ಮೊಳೆಯಾರ ಮಾತನಾಡಿದರು.

ಈ ಕಾರ್ಯಗಾರದಲ್ಲಿ ಮಿಜಾರು ಮೈಟ್ ಕಾಲೇಜಿನ ಪ್ರಾಧ್ಯಾಪಕ ವರುಣರವರು ಸಂಪನ್ಮೂಲ ವ್ಯಕ್ತಿಗಳಾಗಿ, ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಯ ಮೂಲಕ ವೃತ್ತಿಪರ ಸಂದರ್ಶನಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ನಿರ್ದೇಶಕ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್, ಪ್ರಕಾಶ್, ಅಕ್ಷತಾ ರಾಜ್ , ದಿವ್ಯಶ್ರೀ , ಅಕ್ಷತಾ, ಬಿಸಿಎ ವಿಭಾಗದ ಒಟ್ಟು 121 ವಿದ್ಯಾರ್ಥಿಗಳು ಅಧ್ಯಾಪಕ ವೃಂದ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.