ಕಾಪು : ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನ, ಎಲ್ಲೂರು ಇಲ್ಲಿ ಫೆಬ್ರವರಿ 5, ಶನಿವಾರ ಬೆಳಗ್ಗೆ 10.30ಕ್ಕೆ ಶ್ರೀ ವೀರಾಂಜನೇಯ ದೇವರ ಸನ್ನಿಧಿಯಲ್ಲಿ ಕೆ. ಲಕ್ಷ್ಮೀನಾರಾಯಣ ರಾವ್ ಮತ್ತು ಸಹೋದರರು, ಪಡುಕುದುರೆ ಇವರು ಸೇವಾ ರೂಪದಲ್ಲಿ ಶ್ರೀ ವೀರಾಂಜನೇಯ ದೇವರಿಗೆ ಬೆಳ್ಳಿಯ ಕವಚ ಸಮರ್ಪಣೆ ಮಾಡಲಿದ್ದಾರೆ.
ಈ ಪುಣ್ಯಕಾರ್ಯದಲ್ಲಿ ಭಕ್ತಾದಿಗಳು ಭಾಗವಹಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.