ಕಾಪು : ಪಕ್ಷ ಸಂಘಟನೆಯ ಹೊಣೆಯರಿತ ಜವಾಬ್ದಾರಿ ಮತ್ತು ಸಂಘಟನಾ ಸಾಮರ್ಥ್ಯವನ್ನು ಗುರುತಿಸಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆಯವರ ಶಿಪಾರಸ್ಸಿನ ಮೇರೆಗೆ, ಪೆರ್ಡೂರಿನ ಕಾಂಗ್ರೆಸ್ ಮುಖಂಡರಾದ ಶಾಂತಾರಾಮ್ ಸೂಡ ರವರ ಮುತುವರ್ಜಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಕಾಪು ವಿಧಾನಸಭಾ ಕ್ಷೇತ್ರದ ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಸಂತೋಷ್ ಕುಲಾಲ್ ಪಕ್ಕಾಲು ಅವರನ್ನು ಆಯ್ಕೆ ಮಾಡಲಾಗಿದೆ.