ಪಡುಬಿದ್ರಿ : ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ
Posted On:
10-02-2022 06:34PM
ಪಡುಬಿದ್ರಿ : ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿಯೋರ್ವಳು ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿ ಬ್ರಹ್ಮಸ್ಥಾನದ ಬಳಿ ನಡೆದಿದೆ.
ಪಡುಬಿದ್ರಿ ಇಲೆಕ್ಟ್ರಿಕಲ್ ಕಾಂಟ್ರ್ಯಾಕ್ಟರ್ ರಾಮಕೃಷ್ಣ ಎಂಬುವವರ ಎರಡನೆಯ ಮಗಳಾದ ಸೌಜನ್ಯ (22) ಹೈದರಾಬಾದಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದಳು. ವಕ್೯ ಫ್ರಂ ಹೋಮ್ ಮೂಲಕ ಕಾರ್ಯನಿರ್ವಹಿಸುತ್ತಿದ್ದಳು. ತಂದೆಯ ಅನಾರೋಗ್ಯದ ನಿಮಿತ್ತ ತಂದೆ ತಾಯಿ ಜೊತೆಯಾಗಿ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ ಮೊಬೈಲ್ ರಿಚಾಜ್೯ ಬಗ್ಗೆ ತಾಯಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಳು ಎಂದು ತಿಳಿದು ಬಂದಿದೆ. ಇದು ತಾಯಿಯೊಂದಿಗೆ ಆಕೆಯ ಕೊನೆಯ ಕರೆಯಾಗಿತ್ತು.
ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಮನೆಗೆ ಬಂದು ಹೆತ್ತವರು ಕೋಣೆಯ ಬಾಗಿಲು ಬಡಿದಾಗ ತೆರೆಯದಿದ್ದನ್ನು ಕಂಡು ಕಿಟಕಿಯ ಮೂಲಕ ನೋಡಿದಾಗ ನೇಣಿಗೆ ಶರಣಾದ ದೃಶ್ಯ ಕಂಡು ಬಂದಿತ್ತು. ಆತ್ಮಹತ್ಯೆಗೂ ಮುನ್ನ ಸ್ಥಳೀಯ ವಾಟ್ಸಾಪ್ ಗ್ರೂಪಿನಲ್ಲಿ ಈಕೆ ಹೊರ ಬಂದಿದ್ದಳು. ಸಾವಿಗೂ ಮುನ್ನ ಬರೆದ ಡೆತ್ ನೋಟಿನಲ್ಲಿ ತನ್ನ ಬಾಲ್ಯದ ದಿನಗಳು ಮತ್ತು ಅಪ್ಪ ಅಮ್ಮ ನನ್ನನ್ನು ಕ್ಷಮಿಸಿ ಎಂದು ಬರೆದಿದ್ದಾಳೆ ಎಂದು ಪೋಲಿಸರು ತಿಳಿಸಿದ್ದಾರೆ.
ಸೌಮ್ಯ ಸ್ವಭಾವದ ಈಕೆ ಮನೆಯವರೊಂದಿಗೆ ಅನ್ಯೋನ್ಯತೆಯಿಂದ ಇದ್ದಳು. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.