ಕಾಪು : ಇಲ್ಲಿನ ಪುರಸಭೆಯಲ್ಲಿ ಸಾರ್ವಜನಿಕರ ಸೇವೆಗಾಗಿ ಇದ್ದಂಥ ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರ ಯಾವುದೇ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡದೆ ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರಗಳನ್ನು ಮುಚ್ಚಿದ್ದಾರೆ ಇದನ್ನು ಕೂಡಲೇ ಆರಂಭಿಸಬೇಕು. ಕಾಪು ಕ್ಷೇತ್ರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಒಂದು ಬದಿಯ ಬೀದಿ ದೀಪಗಳು ಉರಿಯುತ್ತಿಲ್ಲ ಇದನ್ನು ಸರಿಪಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷರಾದ ಸಂತೋಷ್ ಆಗ್ರಹಿಸಿದ್ದಾರೆ.
ಕಾಪು ಪುರಸಭೆ ಹಾಗೂ ಕಾಪು ತಾಲೂಕಿಗೆ ಸಂಬಂಧಪಟ್ಟ ಸಾವಿರಾರು ಜನರು ಆಧಾರ ಕಾರ್ಡು ತಿದ್ದುಪಡಿಗಾಗಿ ಪರದಾಡುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರಿಗೆ ಸರಿಯಾದ ಮಾಹಿತಿಯನ್ನು ಕೊಟ್ಟು ಆಧಾರ್ ಕಾರ್ಡ್ ಕೇಂದ್ರವನ್ನು ಬಂದ್ ಮಾಡುವ ಮುಂಚೆ ಸಾರ್ವಜನಿಕರ ಗಮನಕ್ಕೆ ತಿಳಿಸಬೇಕಿತ್ತು. ಆದರೆ ನಿದ್ರೆಯಲ್ಲಿ ಇರುವ ಅಧಿಕಾರಿಗಳು ಗಮನಕ್ಕೆ ಬಂದ ಕೂಡಲೇ ಆಧಾರ್ ಕಾರ್ಡ್ ಕೇಂದ್ರವನ್ನು ಪುನರ್ ಆರಂಭಿಸಬೇಕು ಹಾಗೂ ಕಾಪು ಕ್ಷೇತ್ರಕ್ಕೆ ಸಂಬಂಧಪಟ್ಟ 66 ರಾಷ್ಟ್ರೀಯ ಹೆದ್ದಾರಿ ಯಲ್ಲಿ ಎರಡೂ ಬದಿಯಲ್ಲಿ ಇರುವಂಥ ದಾರಿದೀಪದಲ್ಲಿ ಒಂದು ಬದಿಯ ದಾರಿದೀಪಗಳು ಮಾತ್ರ ಉರಿಯುತ್ತಿದೆ. ಇನ್ನೊಂದು ಬದಿಯ ದಾರಿ ದೀಪಗಳು ಉರಿಯದೆ ನಿಂತಿದೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿದೆ. ಆಧಾರ್ ಮತ್ತು ಬೀದಿ ದೀಪದ ಸಮಸ್ಯೆಗಳ ಬಗ್ಗೆ ಶಾಸಕರು ಮತ್ತು ಅಧಿಕಾರಿ ವರ್ಗಕ್ಕೆ ಈ ಮೂಲಕ
ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.