ಉಕ್ರೇನ್ನಲ್ಲಿ ಇರುವವರು, ಅಲ್ಲಿ ಸಿಲುಕಿಕೊಂಡಿರುವ ಜನರ ಕುಟುಂಬಸ್ಥರು ನೇರವಾಗಿ ಜಿಲ್ಲಾಡಳಿತವನ್ನು ಸಂಪರ್ಕಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳ ಮನವಿ
Posted On:
24-02-2022 10:10PM
ಮಂಗಳೂರು: ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಉಕ್ರೇನ್ ನಲ್ಲಿ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ ಜನರು ನೆಲೆಸಿದ್ದರೆ ಅಥವಾ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ನೀಡುವಂತೆ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜನತೆಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಯಾರಾದರೂ ನಮ್ಮವರು ಅಲ್ಲಿ ಸಮಸ್ಯೆಗೆ ಸಿಲುಕಿದ್ದರೆ ಮಾಹಿತಿ ನೀಡಿ, ಅಲ್ಲಿ ಇರುವವರು ಹಾಗೂ ಅಲ್ಲಿ ಸಿಲುಕಿಕೊಂಡಿರುವ ಜನರ ಕುಟುಂಬಸ್ಥರು ನೇರವಾಗಿ ಜಿಲ್ಲಾಡಳಿತವನ್ನು ಸಂಪರ್ಕಿಸಬಹುದು ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮತ್ತು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ರವರು ಜಿಲ್ಲಾಧಿಕಾರಿಯವರ ಕಚೇರಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ 1077 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಸಹಾಯವಾಣಿ ಆರಂಭಿಸಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರು ಭಾರತದ ದೂತಾವಾಸ ಮತ್ತು ಸರ್ಕಾರದ ಜೊತೆ ಸಂಪರ್ಕದಲ್ಲಿರಲು ವಿದೇಶಾಂಗ ಇಲಾಖೆಯ 1800118797 (Toll free), +91-11-23012113, +91-11 23014104, +91-11-23017905 ಸಂಪರ್ಕ ಸಂಖ್ಯೆಗೆ ಕರೆ Fax: +91-11-23088124, Email: situationroom@mea.gov.in ಮೂಲಕ ಮಾಹಿತಿ ನೀಡಲು ಸರ್ಕಾರ ಸೂಚಿಸಿದೆ.