ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಲ್ಸ್ ಪೋಲಿಯೋ : ರೋಟರಿ ಕಲ್ಯಾಣಪುರ ಅಧ್ಯಕ್ಷರಿಂದ ಚಾಲನೆ

Posted On: 27-02-2022 10:30PM

ಉಡುಪಿ : ರೋಟರಿ ಕಲ್ಯಾಣಪುರದ ವ್ಯಾಪ್ತಿಯಲ್ಲಿ ನಡೆದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಂಸ್ಥೆಯ ಅಧ್ಯಕ್ಷರಾದ ಶಂಭು ಶಂಕರ್ ಹಾಗೂ ನಿರಂತರವಾಗಿ 25ವರ್ಷಗಳಿಂದ ಈ ಸಂಸ್ಥೆಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಿರ್ದೇಶಕರಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತ ಬಂದಿರುವ ಗಿರಿಧರ್ ಬಾಳಿಗ ನೇತೃತ್ವದಲ್ಲಿ ಫೆಬ್ರವರಿ 27ರಂದು ಸರ್ಕಾರದ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಿರ್ವಹಿಸಲಾಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರ ಹೂಡೆ ಮತ್ತು ಕೊಳಲಗಿರಿಯ 5 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇ.96 ಅರ್ಹ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಯಿತು. ಇನ್ನು ಉಳಿದ 2ದಿನಗಳಲ್ಲಿ ಬಾಕಿ ಇದ್ದಿರುವ ಎಲ್ಲಾ ಅರ್ಹ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಲು ಕ್ರಮ ವಹಿಸಲಾಯಿತು.

ರೋಟರಿ ಕಲ್ಯಾಣಪುರದ ಸದಸ್ಯರು 6 ತಂಡಗಳಲ್ಲಿ 2 ಪ್ರಾಥಮಿಕ ಆರೋಗ್ಯ ಕೇಂದ್ರದ 22 ಖಾಯಂ ಮತ್ತು 1 ವಿಶೇಷ ಪೋಲಿಯೋ ಲಸಿಕಾ ಕೇಂದ್ರಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಅಗತ್ಯ ಪ್ರಮಾಣದಲ್ಲಿ ವ್ಯಾಕ್ಸಿನ್ಗಳನ್ನು ಸರಬರಾಜು ಮಾಡಲಾಯಿತು. ಈ ಕೇಂದ್ರಗಳ 135 ಸಿಬ್ಬಂದಿಯವರು ಮತ್ತು ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ವಲಯ ಸೇನಾನಿ ಬ್ರಯಾನ್ ಡಿಸೋಜ, ಕಾರ್ಯದರ್ಶಿ ಪ್ರಕಾಶ್ ಕುಮಾರ್, ಮತ್ತಿತರ ರೋಟರಿ ಪದಾಧಿಕಾರಿಗಳು, ಸದಸ್ಯರು ಹಾಗೂ ಯುವ ವಿಚಾರ ವೇದಿಕೆ ಉಪ್ಪೂರು ಇದರ ಸದಸ್ಯರು ಉಪಸ್ಥಿತರಿದ್ದರು.