ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ ಮಹಿಳಾ ಬಳಗದ ಒಂಭತ್ತನೆ ವರ್ಷದ ವಾರ್ಷಿಕೋತ್ಸವ
Posted On:
09-03-2022 05:59PM
ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ ಶಿರ್ವ, ಮಹಿಳಾ ಬಳಗದ ವತಿಯಿಂದ ಶಿರ್ವ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಒಂಭತ್ತನೆ ವರ್ಷದ ವಾರ್ಷಿಕೋತ್ಸವವು ಜರಗಿತು.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮುದರಂಗಡಿ ಶ್ರೀ ದುರ್ಗಾ ಮಂದಿರದ ಅರ್ಚಕರಾದ ಶ್ರೀಧರ ಆಚಾರ್ಯರು ಮಾತನಾಡಿ ದೈವ ದೇವರ ಒಲುಮೆಯಿಂದ ಕಾರ್ಯಸಿದ್ಧಿಯಾಗುತ್ತದೆ. ಮನುಷ್ಯನ ಅತಿ ಆಸೆಯೆ ಅವನ ಅವನತಿಗೆ ಕಾರಣವಾಗುತ್ತದೆ. ನಮಗೆ ಭಗವಂತ ಎಷ್ಟು ದಯಪಾಲಿಸುತ್ತಾನೊ ಅದನ್ನು ಸಂತೋಷದಿಂದ ಸ್ವೀಕರಿಸಿ ನೆಮ್ಮದಿಯ ಜೀವನ ನಡೆಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ 14 ಜನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಮತ್ತು ಆರೋಗ್ಯ ನಿಧಿ ವಿತರಿಸಲಾಯಿತು.
ಗೌರವಾಧ್ಯಕ್ಷ ಸುರೇಶ್ ಆಚಾರ್ಯ, ಮಹಿಳಾ ಬಳಗದ ಅಧ್ಯಕ್ಷೆ ಸುಮತಿ ಭಾಸ್ಕರ್ ಆಚಾರ್ಯ, ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದ ರವಿ ಪುರೋಹಿತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಧ್ಯಕ್ಷ ಉಮೇಶ್ ಆಚಾರ್ಯ ಸ್ವಾಗತಿಸಿ, ವಾಸು ಆಚಾರ್ಯ ಪರ್ಕಳ ಪ್ರಾಸ್ತಾವನೆಗೈದರು. ಕೋಶಾಧಿಕಾರಿ ಪ್ರಶಾಂತ್ ಆಚಾರ್ಯ ವಿದ್ಯಾರ್ಥಿ ವೇತನದ ಪಟ್ಟಿ ವಾಚಿಸಿದರು. ಶರ್ಮಿಳಾ ಸದಾಶಿವ ಆಚಾರ್ಯ ಬಹುಮಾನದ ಪಟ್ಟಿ ವಾಚಿಸಿದರು. ಕಾರ್ಯದರ್ಶಿ ಮಾಧವ ಆಚಾರ್ಯ ವರದಿ ವಾಚಿಸಿ, ಪ್ರೀತಂ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಪ್ರೀತಿ ಆಚಾರ್ಯ ವಂದಿಸಿದರು.