ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ - ಇಬ್ಬರ ಮೃತ್ಯು, ಮೂವರು ಗಂಭೀರ
Posted On:
21-03-2022 01:01PM
ಕಾಪು : ಇಲ್ಲಿನ ಮಲ್ಲಾರು ಸಲಫಿ ಮಸೀದಿ ಸಮೀಪಗುಜರಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಮಾಚ್೯ 21ರಂದು ನಡೆದಿದೆ.
ಮೃತರನ್ನು ರಜಾಕ್ ಮಲ್ಲಾರ್ ಮತ್ತು ರಜಬ್ ಚಂದ್ರನಗರ ಎಂದು ಗುರುತಿಸಲಾಗಿದೆ.
ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಗುಜರಿ ಅಂಗಡಿಯಲ್ಲಿ ಇರಿಸಲಾದ ಹಳೆಯ ಪ್ರಿಜ್ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಕಾಪು ಪೊಲೀಸರು ಧಾವಿಸಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.