ಹೆಜಮಾಡಿ : ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆಗೆ ಚಾಲನೆ
Posted On:
22-03-2022 12:03PM
ಹೆಜಮಾಡಿ : ಸುರತ್ಕಲ್‌ನ ಎನ್.ಐ.ಟಿ.ಕೆ. ಬಳಿಯ ಟೋಲ್ ಗೇಟನ್ನು ಶೀಘ್ರವಾಗಿ ತೆರವುಗೊಳಿಸುವಂತೆ ಆಗ್ರಹಿಸಿ ಮಾಚ್೯ 22ರಂದು ಬೃಹತ್ ಪಾದಯಾತ್ರೆಗೆ ವಿವಿಧ ಪಕ್ಷ, ಸಂಘ-ಸಂಸ್ಥೆ ಮತ್ತು ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಹೆಜಮಾಡಿ ಟೋಲ್ ಗೇಟ್ ಬಳಿ ಚಾಲನೆ ನೀಡಲಾಯಿತು.
ಹೆಜಮಾಡಿ ಟೋಲ್ ಗೇಟ್ ನಿಂದ ಆರಂಭವಾಗಿ ಸುರತ್ಕಲ್ ಟೋಲ್ ಗೇಟ್ ವರೆಗೆ ಪಾದಯಾತ್ರೆಯು ಸಾಗಲಿದೆ. ಸುಮಾರು ಸಾವಿರಾರು ಮಂದಿಯಷ್ಟು ಸೇರಿದ ಪ್ರತಿಭಟನಾಕಾರರು, ಸಂಸದರು ಮತ್ತು ಶಾಸಕರ ವಿರುದ್ಧ ಘೋಷಣೆಯನ್ನು ಕೂಗಿ ಸುರತ್ಕಲ್ ಟೋಲ್ ತೆರವುಗೊಳಿಸಲು ವಿಳಂಬಿಸಿದ್ದಲ್ಲಿ ಮುಂದೆ ನಡೆಯ ಬಹುದಾದ ದುರಂತಕ್ಕೆ ನೀವೇ ಜವಾಬ್ದಾರಿ ಆಗಲಿದ್ದೀರಿ ಎಂಬುದಾಗಿ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಸಂಘಸಂಸ್ಥೆಗಳ ಪ್ರಮುಖರು, ರಾಜಕೀಯ ನಾಯಕರು, ನಾಗರಿಕರು ಉಪಸ್ಥಿತರಿದ್ದರು.