ಯುವವಾಹಿನಿ ಕಾಪು ಘಟಕದ 2022 ನೇ ಸಾಲಿನ ಪದಗ್ರಹಣ, ಸಮ್ಮಾನ
Posted On:
28-03-2022 08:29PM
ಕಾಪು,ಮಾ.28 : ಯುವವಾಹಿನಿ (ರಿ.) ಕಾಪು ಘಟಕದ 2022ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕಾಪು ಜೇಸಿಐ ಭವನದಲ್ಲಿ ಜರಗಿತು.
ಸಮಾರಂಭವನ್ನು ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಅತಿಥಿಗಳಾಗಿ ಉಡುಪಿಯ ವಕೀಲರಾದ ಸಂಕಪ್ಪ ಭಾಗವಹಿಸಿದ್ದರು.
ಸಮ್ಮಾನ : 2021ನೇ ಸಾಲಿನಲ್ಲಿ ಕಾಪು ಪುರಸಭಾ ಚುನಾವಣೆಯಲ್ಲಿ ವಿಜೇತರಾದ ಬಿಲ್ಲವ ಸಮುದಾಯದ ನಾಲ್ವರು ಸದಸ್ಯರನ್ನು ಸನ್ಮಾನಿಸಲಾಯಿತು.
ಪ್ರತಿಜ್ಞಾ ವಿಧಿ ಬೋಧನೆ : ಕಾಪು ಯುವವಾಹಿನಿ ಘಟಕದ 2022 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಪ್ರತಿಜ್ಞಾವಿಧಿ ಬೋಧಿಸಿದರು.
ಅಧಿಕಾರ ಹಸ್ತಾಂತರ : ಯುವವಾಹಿನಿ ಕಾಪು ಘಟಕದ ಅಧ್ಯಕ್ಷೆ ಸೌಮ್ಯ ರಾಕೇಶ್ ನೂತನ ಅಧ್ಯಕ್ಷರಾದ ಸಚಿನ್ ಉಚ್ಚಿಲ ಇವರಿಗೆ, ಕಾರ್ಯದರ್ಶಿ ಸುಧಾಕರ ಸಾಲಿಯಾನ್ ನೂತನ ಕಾರ್ಯದರ್ಶಿ ಸುಮಿತ್ರಾರವರಿಗೆ ಅಧಿಕಾರ ಹಸ್ತಾಂತರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕಾಪು ಯುವವಾಹಿನಿ ಘಟಕದ ಅಧ್ಯಕ್ಷೆ ಸೌಮ್ಯ ರಾಕೇಶ್ ವಹಿಸಿದ್ದರು. ಕಾಪು ಯುವವಾಹಿನಿ ಘಟಕದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ದೀಪಕ್ ಕುಮಾರ್ ಏರ್ಮಾಳ್, ಪತ್ರಕರ್ತ ರಾಕೇಶ್ ಕುಂಜೂರು, ಯುವವಾಹಿನಿ ಕೇಂದ್ರ ಸಮಿತಿಯ ಪದಾಧಿಕಾರಿಗಳು, ಘಟಕದ ಸದಸ್ಯರು ಉಪಸ್ಥಿತರಿದ್ದರು.