ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟ್ರಿಯ ಪ್ರಶಸ್ತಿಗೆ ಮೊಹಮ್ಮದ್ ಫಾರೂಕ್ ಚಂದ್ರನಗರ, ದಿವಾಕರ ಬಿ ಶೆಟ್ಟಿ ಕಳತ್ತೂರು ಆಯ್ಕೆ
Posted On:
11-04-2022 10:36PM
ಕಾಪು : ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಏಪ್ರಿಲ್ 20 ರಂದು ಗೋವಾದ ಪಂಚಾತಾರ ಹೋಟೆಲ್ ವಿವಿಟಾ ತಾಜ್ ಸಭಾಂಗಣದಲ್ಲಿ ನಡೆಯುವ ಐ.ಜೆ.ಸಿ ಹಾಗೂ ಇ.ಜೆ.ಎಸ್.ಐ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಮಾಜ ಸೇವಕರಿಗೆ ಕೊಡಮಾಡುವ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿಗೆ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಮತ್ತು ದಿವಾಕರ ಬಿ ಶೆಟ್ಟಿ ಕಳತ್ತೂರು ಆಯ್ಕೆಯಾಗಿದ್ದಾರೆ ಎಂದು ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ಸಂಸ್ಥೆ ಇದರ ಅಧ್ಯಕ್ಷರಾದ ಗ್ಯಾನ್ ಪ್ರಕಾಶ್ ದೆಹಲಿ ಇವರು ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.
ಮೊಹಮ್ಮದ್ ಫಾರೂಕ್ ಉದ್ಯಮಿಯಾಗಿದ್ದು ಸ್ನೇಹ ಜೀವಿಯಾಗಿ ಕಾಪು ಪರಿಸರದ ಸಮಾಜ ಸೇವಕರಾಗಿ ಎಲ್ಲರ ಗಮನ ಸೆಳೆದು ನೂರಾರು ಕಡೆ ಗೌರವ ಸನ್ಮಾನ ಪಡೆದುಕೊಂಡಿರುತ್ತಾರೆ. ಈಗಾಗಲೇ ಏಶ್ಯನ್ ಫೆಸಿಫಿಕ್ ಗೋಲ್ಡ್ ಸ್ಟಾರ್ ರಾಷ್ಟ್ರಿಯ ಪ್ರಶಸ್ತಿ, ಕರ್ನಾಟಕ ಸರಕಾರ ಕೊಡಮಾಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕೇರಳ-ಕರ್ನಾಟಕ ರಾಜ್ಯದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯ ಜಾನಪದ ಪರಿಷತ್ ಬೆಂಗಳೂರು ವತಿಯಿಂದ ಸಾಧಕ ರತ್ನ ಪ್ರಶಸ್ತಿ, ಕಾಸರಗೋಡು ಕೈರಳಿ ಪ್ರಕಾಶನ ಇವರಿಂದ ಸಮಾಜ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪಡೆದಿರುತ್ತಾರೆ.
ದಿವಾಕರ ಬಿ ಶೆಟ್ಟಿ ಕಳತ್ತೂರು ಇವರು ಕಳೆದ 30 ವರ್ಷಗಳಿಂದ ಕಾಪು ಕಳತ್ತೂರು ಪರಿಸರದಲ್ಲಿ 1000 ಕ್ಕೂ ಮಿಕ್ಕಿ ಸರಕಾರಿ ಸೌಲಭ್ಯ ಜನರಿಗೆ ತಲುಪುವ ವ್ಯವಸ್ಥೆ ಮಾಡಿರುವುದಲ್ಲದೆ ನೂರಾರು ವಿದ್ಯಾರ್ಥಿಗಳಿಗೆ ವಿವಿಧ ಸಂಸ್ಥೆಗಳಿಂದ ವಿದ್ಯಾರ್ಥಿ ವೇತನ,ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿರುತ್ತಾರೆ. ವಿವಿಧ ಸಂಘಟನೆಯಿಂದ ಬಡ ಜನರಿಗೆ ಮನೆ ಕಟ್ಟುವಲ್ಲಿ ಸಹಾಯ ಮಾಡಿರುತ್ತಾರೆ. ಬಡವರ ಕಷ್ಟ ದಲ್ಲಿ ಸದಾ ಭಾಗಿಯಾಗುತ್ತಾರೆ.
ಹವ್ಯಾಸಿ ಪತ್ರಕರ್ತರಾಗಿದ್ದು, ಕಾಪು ದ್ವಾದಶಿ ಪಬ್ಲಿಸಿಟಿ ನ್ಯೂಸ್ ಸರ್ವಿಸ್ ಇದರ ಆಡಳಿತ ನಿರ್ದೇಶಕರಾಗಿದ್ದು, ಗ್ರಾಮೀಣ ಮಟ್ಟದ ಅಂಚೆ ಇಲಾಖೆಯಲ್ಲಿ ಪೋಸ್ಟ್ ಮಾಸ್ಟರ್ ಆಗಿ ಸೇವೆ ನಿರ್ವಹಿಸುತ್ತಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೋವಾದ ಸಚಿವರು ಕೇಂದ್ರ ಸಚಿವರು ಹಾಗೂ ಅನೇಕ ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.