ಕಾಪು : ಸ್ವಾತಂತ್ರ್ಯದ ಅಮ್ರತ ಮಹೋತ್ಸವದ ನಿಮಿತ್ತ ಕಾಪು ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಏಪ್ರಿಲ್ 19ರಂದು ಅಧ್ಯಕ್ಷರಾದ ಸಚಿನ್ ಸುವರ್ಣ ಇವರ ನೇತೃತ್ವದಲ್ಲಿ ಯೋಧರನ್ನು ಸನ್ಮಾನಿಸುವ ಕಾರ್ಯಕ್ರಮ ಜರಗಿತು.
ಕಾಪು ಪುರಸಭಾ ವ್ಯಾಪ್ತಿಯಲ್ಲಿ 4 ಜನ ಯೋಧರನ್ನು ಗುರುತಿಸಿ ಅವರ ಮನೆಗೆ ತೆರಳಿ ಗೌರವಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಬಿಜೆಪಿ ಕಾಪು ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್, ಪುರಸಭಾ ಸದಸ್ಯರುಗಳಾದ ಅನಿಲ್ ಕುಮಾರ್, ಅರುಣ್ ಶೆಟ್ಟಿ, ಯುವಮೋರ್ಚ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳಾದ ಪ್ರವೀಣ್ ಕುಮಾರ್, ಯತೀಶ್ ಕೋಟ್ಯನ್, ಸೋನು ಪಾಂಗಳ,ಉದಯ್, ರಾಜ್, ವಿನಿಶ್, ಧೀರೇಶ್ ಮತ್ತಿತರರು ಉಪಸ್ಥಿತರಿದ್ದರು.