ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ; ಜಿಲ್ಲಾಡಳಿತದಿಂದ ಪ್ರಕಟನೆ
Posted On:
16-05-2022 10:19PM
ಉಡುಪಿ : ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯು ಮುಂದುವರಿಯುವ ಸಾಧ್ಯತೆಯಿರುವ ಕಾರಣ ಮೇ 17 ಮತ್ತು 19ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮತ್ತು ದಿನಾಂಕ 16 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಪ್ರತಿದಿನ ತಲಾ 100ಮಿ.ಮಿ ರಿಂದ 150ಮಿ.ಮಿ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ ಮೂರು ದಿನಗಳ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕಾಗಿದೆ ಅದರಂತೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.
ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರುವಂತೆ, ಪ್ರವಾಸಿಗರು/ ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸುವುದು ಎಂದು ತಿಳಿಸಿದ್ದಾರೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ದೂರವಾಣಿಗೆ ಸಂಪರ್ಕಿಸುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.