ಅಕ್ರಮ ಗೋಸಾಗಾಟ, ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ; ಬೃಹತ್ ಪ್ರತಿಭಟನೆಯ ಎಚ್ಚರಿಕೆ
Posted On:
16-05-2022 11:36PM
ಪಡುಬಿದ್ರಿ : ವಿಶ್ವ ಹಿಂದು ಪರಿಷದ್, ಬಜರಂಗದಳ ಕಾಪು ಪ್ರಖಂಡ ವತಿಯಿಂದ
ಪಡುಬಿದ್ರಿ ಸುತ್ತ ಮುತ್ತ ನಡೆಯುವ ಅಕ್ರಮ ಗೋಸಾಗಾಟ, ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೇ. 16ರಂದು ಪಡುಬಿದ್ರಿ ಪೋಲಿಸ್ ಠಾಣೆಗೆ ಮನವಿ ನೀಡಲಾಯಿತು.
ಪಡುಬಿದ್ರಿ ಠಾಣಾ ವ್ಯಾಪ್ತಿಯ ಪಡುಬಿದ್ರಿ, ಹೆಜಮಾಡಿ, ಅವರಾಲು ಪ್ರದೇಶದಲ್ಲಿ ಅವ್ಯಾಹತವಾಗಿ ಗೋಸಾಗಾಟ ಮತ್ತು ಅಕ್ರಮ ಕಸಾಯಿಖಾನೆಗಳನ್ನು ನಡೆಸುವ ತಂಡವನ್ನು ಬಂಧಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು.
ಇಂತಹ ಅಕ್ರಮ ದಂಧೆಗಳು ಮುಂದುವರಿದಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಸಂದರ್ಭ ವಿಶ್ವ ಹಿಂದು ಪರಿಷದ್, ಬಜರಂಗದಳದ ಪ್ರಮುಖರು ಉಪಸ್ಥಿತರಿದ್ದರು.