ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ನಲ್ಲಿ ವಿಶ್ವ ಪರಿಸರ ದಿನಾಚರಣೆ
Posted On:
05-06-2022 11:50PM
ಪಡುಬಿದ್ರಿ : ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಅರಣ್ಯ ಇಲಾಖೆ, ಸಿಕಾಮ್, ಬೀಚ್ ಮ್ಯಾನೇಜ್ಮೆಂಟ್ ಕಮಿಟಿ ಹಾಗೂ ಮಣ್ಣು ಉಳಿಸಿ ಅಭಿಯಾನದ ಸಹಯೋಗದೊಂದಿಗೆ ಜೂನ್ 5ರಂದು ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ರಾಷ್ಟ್ರೀಯ ಬ್ಲೂ ಫ್ಲಾಗ್ ಬೀಚ್ ವೀಕ್ಷಕ ಸುಜಿತ್ ದೋಂಗ್ಲೆ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಪರಿಸರ ರಕ್ಷಣೆ ನಮ್ಮ ಕರ್ತವ್ಯ. ಅದರ ಉಳಿವಿಗಾಗಿ ನಾವು ಪ್ರಯತ್ನಿಸಬೇಕು. ಮಣ್ಣಿನ ಸಾವಯವ, ಫಲವತ್ತತೆ ಮುಖ್ಯ. ಕರಾವಳಿಯಲ್ಲಿ ಮಣ್ಣಿನ ರಕ್ಷಣೆ ಅತೀ ಮುಖ್ಯ ಎಂದರು.
ನಿವೃತ್ತ ಐಎಫ್ಎಸ್ ಅಧಿಕಾರಿ ಅಜಯ್ ಸಕ್ಸೇನಾ ಮಾತನಾಡಿ ತ್ಯಾಜ್ಯ ಸಂಸ್ಕರಣೆ, ವಿಲೇವಾರಿ ಮನೆಯಲ್ಲಿಯೇ ಆರಂಭಿಸಬೇಕು. ಮುಂದಿನ ಪೀಳಿಗೆಗೆ ಇದರ ಬಗ್ಗೆ ತಿಳಿಸುವುದು ಅನಿವಾರ್ಯ ಎಂದರು.
ಈ ಸಂದರ್ಭ ದಿಶಾ ಫೌಂಡೇಷನ್ ನ ಜಗ್ಗಿ ವಾಸುದೇವ್ ಅವರ ಅನುಯಾಯಿ ಮಣ್ಣು ಉಳಿಸಿ ಅಭಿಯಾನದ ಸದಸ್ಯ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಸಂದೇಶ್ ಶೆಟ್ಟಿ, ಉಡುಪಿ ಜಿಲ್ಲಾ ಪ್ರವಾಸೋದ್ಯಮ ಉಪನಿರ್ದೇಶಕ ಕ್ಲಿಫಡ್೯ ಲೋಬೊ, ಪಡುಬಿದ್ರಿ ಪಂಚಾಯತ್ ಉಪಾಧ್ಯಕ್ಷೆ ಯಶೋದ, ಪಂಚಾಯತ್ ಸದಸ್ಯರಾದ ಸುಜಾತ ಆಚಾರ್ಯ, ವಿದ್ಯಾಶ್ರೀ, ಯಶ್ವಿನ್ ಬಂಗೇರ, ನವೀನ್ ಕುಮಾರ್, ಪಿಪಿಸಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡಗಳನ್ನು ನೆಡಲಾಯಿತು.
ಕಿರಣ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕ್ಲಿಫಡ್೯ ಲೋಬೊ ವಂದಿಸಿದರು.