ಮುನಿಯಾಲು ಆಯುರ್ವೇದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎನ್ಎಸ್ಎಸ್ ವತಿಯಿಂದ ಪೌಷ್ಟಿಕ ಆಹಾರ, ಸ್ವಚ್ಛತೆಯ ಬಗ್ಗೆ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮ
Posted On:
09-06-2022 11:06PM
ಉಡುಪಿ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಚಿಕೊಡಿ ಇಲ್ಲಿ ಜೂನ್ 08 ರಂದು ಮುನಿಯಾಲು ಆಯುರ್ವೇದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎನ್ಎಸ್ಎಸ್ ಘಟಕದ ವತಿಯಿಂದ ಪೌಷ್ಟಿಕ ಆಹಾರ ಮತ್ತು ಸ್ವಚ್ಛತೆಯ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ಅರ್ಚನಾ ಇವರು ಪೌಷ್ಟಿಕ ಆಹಾರ ಮತ್ತು ಸ್ವಚ್ಛತೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು. ಇವರು ಮಕ್ಕಳಿಗೆ ದಿನನಿತ್ಯ ಜೀವನ ಶೈಲಿ, ಬಿಸಿನೀರು ಕುಡಿಯುವುದು, ಎಣ್ಣೆ ಹಚ್ಚಿ ಸ್ನಾನಮಾಡುವುದರ ಮಹತ್ವವನ್ನು ತಿಳಿಸಿಕೊಟ್ಟರು. ನಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳಲು ದಿನನಿತ್ಯ ಸೊಪ್ಪು, ತರಕಾರಿಯನ್ನು ಸೇವಿಸಬೇಕೆಂದು ತಿಳಿಸಿದರು. ಹಾಗೆಯೇ ದಿನನಿತ್ಯ ವಿಟಮಿನ್ಯುಕ್ತ ಆಹಾರ ಮತ್ತು ಕಬ್ಬಿಣಅಂಶ ಇರುವ ಆಹಾರವನ್ನು ಸೇವಿಸಬೇಕು. ಪ್ರತಿದಿನ 2 ಲೋಟ ಹಾಲನ್ನು ಕುಡಿಯಬೇಕು ಎಂದು ತಿಳಿಸಿ, ಬೆಲ್ಲದ ಪ್ರಾಮುಖ್ಯತೆಯನ್ನು ಹಾಗೂ ಒಂದೆಲಗದ ಪ್ರಾಮುಖ್ಯತೆಯನ್ನು ತಿಳಿಸಿ ಕೊಟ್ಟರು.
ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಔಷಧಿ ಗಿಡವನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಆಶಾಲತಾ, ಎನ್ಎಸ್ಎಸ್ ಅಧಿಕಾರಿಗಳಾದ ಡಾ. ಸುದೀಪ್ ಹಾಗೂ ಡಾ. ಅರ್ಚನಾ ಅವರು ಉಪಸ್ಥಿತರಿದ್ದರು.