ಕಾಪು : ಆನೆಗುಂದಿ ಶ್ರೀ ಸರಸ್ವತೀ ಪೀಠ ಎಜುಕೇಷನ್ ಟ್ರಸ್ಟ್ (ರಿ) ಅಸೆಟ್ ನ ಅಧೀನ ಸಂಸ್ಥೆ ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯಲ್ಲಿ ಮಕ್ಕಳ ಮಧ್ಯಾಹ್ನದ ಊಟದ ಯೋಜನೆಯಾದ ಚಿಣ್ಣರ ಚೈತನ್ಯ ಭೋಜನಕ್ಕೆ ಆನೆಗುಂದಿ ಮಠದ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಅಸೆಟ್ ನ ಪ್ರಧಾನ ಕಾರ್ಯದರ್ಶಿ ಗುರುರಾಜ ಆಚಾರ್ಯ ಮಂಗಳೂರು ,ಉಪಾಧ್ಯಕ್ಷ ವಿವೇಕ ಆಚಾರ್ಯ ಶಿರ್ವ , ಶಿಕ್ಷಕ – ಪೋಷಕ ಸಂಘದ ಅಧ್ಯಕ್ಷ ದೀಪಕ್ ಕಾಮತ್ , ಉಪಾಧ್ಯಕ್ಷೆ ಶೋಭಾ ಆಚಾರ್ಯ ,ವಿದ್ವಾನ್ ಶಂಭುದಾಸ್ ಗುರೂಜಿ, ಪ್ರಾಂಶುಪಾಲ ಗುರುದತ್ತ ಸೋಮಯಾಜಿ , ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.