ವಿವಿಧ ಅಕ್ರಮಗಳ ಬಗ್ಗೆ ದೂರು ನೀಡಿದರೂ ಜಿಲ್ಲಾಧಿಕಾರಿಗಳ ಅಸಡ್ಡೆ ; ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆಗೆ ಸಜ್ಜು
Posted On:
15-06-2022 09:23PM
ಉಡುಪಿ : ಜಿಲ್ಲೆಯ ವಿವಿಧ ಸಂಘಟನೆಗಳಿಂದ ಉಡುಪಿ ಜಿಲ್ಲಾಧಿಕಾರಿಗಳಿಗೆ ನೀಡಿರುವ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ನಿರಂತರವಾಗಿ ದಾಖಲೆ ಸಮೇತ ದೂರು ನೀಡಿದ್ದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದೇ ಉದಾಸಿನ ಭಾವನೆ ತೋರುತ್ತಿರುವ ಹಿನ್ನೆಲೆಯಲ್ಲಿ ಇದರ ವಿರುದ್ಧ ವಿವಿಧ ಸಂಘಟನೆಗಳ ಜಂಟಿ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಛೇರಿ ಎದುರು (ನ್ಯಾಯಕ್ಕಾಗಿ ಹೋರಾಟ) ಧರಣಿ (ಪ್ರತಿಭಟನೆ) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಪ್ರಮುಖರು ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ/ಉಡುಪಿ ಜಿಲ್ಲೆಯಲ್ಲಿ ಮೆಡಿಕಲ್ ಮಾಫಿಯಾಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಸಂಘಟನೆಯಿಂದ ಜಿಲ್ಲಾಧಿಕಾರಿಯವರಿಗೆ ಮಾಚ್೯ 3ರಂದು ದೂರು. ಈ ಬಗ್ಗೆ ಪತ್ರಕರ್ತರಾದ ಕಿರಣ್ ಪೂಜಾರಿ ಕುಂದಾಪುರ ಸಾಕ್ಷಿ ಸಮೇತ ದಾಖಲೆಗಳನ್ನು ಒಳಗೊಂಡ ಮನವಿಯನ್ನು ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಅಧಿಕಾರಿಗಳು, ಹಾಗೂ ಮುಖ್ಯಮಂತ್ರಿ, ಆರೋಗ್ಯ ಮಂತ್ರಿ, ಗೃಹ ಮಂತ್ರಿ ಮತ್ತು ಸಂಬಂಧಪಟ್ಟ ಪೋಲಿಸ್ ಇಲಾಖೆ ಎಲ್ಲರಿಗೂ ತಪ್ಪಿತಸ್ಥ ಬಿ.ಎ.ಎಂ.ಎಸ್. ವೈದ್ಯರು (ಆರ್ಯುವೇದಿಕ್) ಗಳ ಮೇಲೆ ಕ್ರಮ ಕೈಗೊಂಡು ಸಾರ್ವಜನಿಕರ ಪ್ರಾಣ ಹಾನಿಯನ್ನು ರಕ್ಷಣೆ ಮಾಡಬೇಕೆಂದು ಕೋರಿದ್ದರು ಕ್ರಮ ಕೈಗೊಳ್ಳದೆ ಇರುವ ಬಗ್ಗೆ.
ಉಡುಪಿ ಜಿಲ್ಲಾ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಹೋರಾಟ ವೇದಿಕೆಯಿಂದ ಉಡುಪಿ ಜಿಲ್ಲಾಧಿಕಾರಿ ಮತ್ತು ಅಧ್ಯಕ್ಷರು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಉಡುಪಿ ಇವರಿಗೆ ಕುಂದಾಪುರ ತಾಲೂಕಿನ ತಹಶೀಲ್ದಾರರಾದ ಕಿರಣ್ ಗೌರಯ್ಯ ಇವರು ನಕಲಿ ಪರಿಶಿಷ್ಟ ಮೊಗೇರ ಜಾತಿ ಪ್ರಮಾಣ ಪತ್ರ ಪಡೆದು ಸರಕಾರಕ್ಕೆ ವಂಚನೆ ಮಾಡಿರುವ ಬಗ್ಗೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ದೂರು.
ಬ್ರಹ್ಮಾವರ ಸೀತಾನದಿ ರಾಜ್ಯ ಹೆದ್ದಾರಿ (ಹಿಂದಿನ ಲೋಕೊಪಯೋಗಿ ರಸ್ತೆ) ಯನ್ನು ಅಂದಾಜು ಸುಮಾರು 30 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪ್ರಾರಂಭದಲ್ಲಿ ವೇದಿಕೆಯು ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಮತ್ತು ಸರಕಾರಿ ಭೂಮಿ ಒತ್ತುವರಿಯನ್ನು ತೆರವುಗೊಳಿಸಿ ರಸ್ತೆ ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ಸಾರ್ವಜನಿಕ ಧರಣಿ ಕೂಡ ನಡೆಸಿ ಜಿಲ್ಲಾಡಳಿತಕ್ಕೆ ಮತ್ತು ಸರ್ಕಾರಕ್ಕೆ ಮನವಿ ನೀಡಲಾಗಿದೆ. ಇದುವರೆಗೆ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆದಿರುವುದಿಲ್ಲ.
ಮೀಸಲು ಅರಣ್ಯ ಭೂಮಿ ಸರ್ವೆ ನಂಬ್ರ 147 ರಲ್ಲಿ ಪರಿಶಿಷ್ಟ ಪಂಗಡದ ನಿಧಿಯನ್ನು ದುರ್ಬಳಕೆ ಮಾಡಿ ಅರಣ್ಯದ ಜಾಗದಲ್ಲಿ ಕರ್ಜೆ ಎಂಬಲ್ಲಿ ರಸ್ತೆ ನಿರ್ಮಾಣ ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ಇವರಿಗೆ ನಮ್ಮ ವೇದಿಕೆ ಮತ್ತು ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ ಮನವಿ ನೀಡಿದೆ.
ಬ್ರಹ್ಮಾವರದ ಚಾಂತಾರು ಗ್ರಾಮ ಪಂಚಾಯತ್ ಆಡಳಿತದಲ್ಲಿ ಪಂಚಾಯತ್ ಸದಸ್ಯರ ಕುಟುಂಬಗಳಿಗೆ ಪಂಚಾಯತ್ ಅಂಗಡಿಕೋಣೆಗಳನ್ನು ಕಡಿಮೆ ಬಾಡಿಗೆಗೆ ನೀಡಿ ಕಳೆದ 2004 ರಿಂದ ಸರಕಾರದ ಖಜಾನೆಗೆ ನಷ್ಟ ಉಂಟು ಮಾಡಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಲಾಗಿದೆ. ಈ ಬಗ್ಗೆ 2011 ರಿಂದ ಜಿಲ್ಲಾಡಳಿತಕ್ಕೆ ಸರಕಾರಕ್ಕೆ ದೂರು ನೀಡಲಾಗಿದೆ.
ಬೈಂದೂರು ಉಪತಹಶೀಲ್ದಾರರಾಗಿರುವ ಲತಾ ಎಸ್. ಶೆಟ್ಟಿ ಎಂಬುವರು ಸರಕಾರಿ ಜಮೀನನ್ನು ಕಬಳಿಸುವ ಸಂಚು ನಡೆಸಿ ಅಕ್ರಮವಾಗಿ ಭೂಮಿ ಮಂಜೂರಾತಿ ಮಾಡಿಕೊಂಡಿರುವ ಬಗ್ಗೆ ದೂರು
ಉಡುಪಿ ಜಿಲ್ಲೆಯಲ್ಲಿ ಆಯುಷ್ಮಾನ್ ಯೋಜನೆಗಳಿಗೆ ಮತ್ತು ಅದರ ದೂರುಗಳಿಗೆ ಜಿಲ್ಲಾಡಳಿತ ಸರಿಯಾಗಿ ಸ್ಪಂದಿಸುತ್ತಿಲ್ಲ.
ಉಡುಪಿ ಜಿಲ್ಲೆಯಲ್ಲಿ ನ್ಯಾಯಾಲಯ ನೀಡುವ ಆದೇಶ ಪಾಲನೆ ಮಾಡದೇ ಇರುವ ಬಗ್ಗೆ ನಮ್ಮ ವೇದಿಕೆಯಿಂದ ಉಚ್ಚನ್ಯಾಯಾಲಯದ ನ್ಯಾಯ ಮೂರ್ತಿಯವರಿಗೆ ಜಿಲ್ಲಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಪಂಚಾಯತ್ ದೂರು ನೀಡಲಾಗಿದೆ.
ಉಡುಪಿ ಜಿಲ್ಲೆಯ ಜಿಲ್ಲಾ ಕಛೇರಿ ಮತ್ತು ಅಧೀನ ಕಛೇರಿಗಳಲ್ಲಿ ಸಾರ್ವಜನಿಕರ ದೂರುಗಳಿಗೆ ಹಿಂಬರಹ ನೀಡದೆ ಇರುವ ಬಗ್ಗೆ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಶೇಖರ್ ಹಾವಂಜೆ, ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಚಾಲಕರು, ಸದಾಶಿವ ಶೆಟ್ಟಿ, ಜಿಲ್ಲಾಧ್ಯಕ್ಷರು RTI ಕಾರ್ಯಕರ್ತ ಸಮಿತಿ, ಉಡುಪಿ ಜಿಲ್ಲೆ, ಸಪನ್ ಕರ್ನಾಟಕ ರಾಷ್ಟ್ರ ಸಮಿತಿ (KRS) ಉಡುಪಿ, ಸದಾಶಿವ ಕೋಟೆಗಾರ್, ಕಾರ್ಯದರ್ಶಿ ಜನತಾ ವೇದಿಕೆ ಕುಂದಾಪುರ, ಸತೀಶ್ ಪೂಜಾರಿ ಬಾರ್ಕೂರ್ ನಾಗರಿಕ ಹಿತರಕ್ಷಣಾ ಸಮಿತಿ, ಬ್ರಹ್ಮಾವರ ಉಪಸ್ಥಿತರಿದ್ದರು.