ಕಾಪು : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಗ್ರಾಮದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾದ ಮಂಜುಳಾ ಆಚಾರ್ಯರವರು ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಒಪ್ಪಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮತ್ತು ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಸಮ್ಮತಿ ಮೇರೆಗೆ ಇಂದು ಕಾಪು ಬಿಜೆಪಿ ಕಛೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಶ್ರೀಕಾಂತ್ ನಾಯಕ್ , ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಹಾಗೂ ಪ್ರಮುಖರಾದ ಗಂಗಾಧರ ಸುವರ್ಣ, ಶಿಲ್ಪಾ ಸುವರ್ಣ, ಶಶಿಪ್ರಭಾ ಶೆಟ್ಟಿ, ಗೋಪಾಲಕೃಷ್ಣ ರಾವ್, ಕೇಸರಿ, ಶರ್ಮಿಳಾ ಆಚಾರ್ಯ, ಸಂದೀಪ್ ರಾವ್, ಸುಶಾಂತ್ ಕುತ್ಯಾರು, ಮಧುಸೂದನ್, ವಿಜಯ್ ಕುಮಾರ್, ನವೀನ್ ಎಸ್ ಕೆ, ಗಣೇಶ್ ಶೆಟ್ಟಿ ಹೇರೂರು, ನಳಿನಾಕ್ಷಿ ಆಚಾರ್ಯ, ಶೈಲಜಾ ನಾರಾಯಣ ಪೂಜಾರಿ, ನಿತ್ಯಾನಂದ ಆಚಾರ್ಯ, ಮೇಘನಾಥ ಆಚಾರ್ಯ, ದಿನೇಶ್ ದೇವಾಡಿಗ, ಶ್ರೀನಿವಾಸ ದೇವಾಡಿಗ, ಶಂಕರ್ ಹೇರೂರು ಹಾಗೂ ಮಜೂರು ಗ್ರಾಮ ಪಂಚಾಯತ್ ನ ಎಲ್ಲಾ ಬಿಜೆಪಿ ಬೆಂಬಲಿತ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.