ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜೂನ್ 20 : ಆನೆಗುಂದಿ ಶ್ರೀ ಸರಸ್ವತೀ ಪೀಠ ಸೂರ್ಯಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ನಲ್ಲಿ ವಿವಿಧ ವಿದ್ಯಾರ್ಥಿ ಕ್ಲಬ್ ಗಳ ಉದ್ಘಾಟನೆ

Posted On: 17-06-2022 07:56PM

ಕಾಪು : ಶಾಲಾ ಶೈಕ್ಷಣಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆಯು ಅತ್ಯಂತ ಮಹತ್ವದ್ದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಉದ್ದೇಶ . ಈ ನಿಟ್ಟಿನಲ್ಲಿ ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನಲ್ ಟ್ರಸ್ಟ್ ನ ಅಧೀನ ಸಂಸ್ಥೆಯಾದ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಕುತ್ಯಾರುವಿನಲ್ಲಿ ವಿವಿಧ ವಿದ್ಯಾರ್ಥಿ ಕ್ಲಬ್ ಗಳನ್ನು ರಚಿಸಿದ್ದು ಈ ಕ್ಲಬ್ ಗಳ ಉದ್ಘಾಟನಾ ಸಮಾರಂಭವು ದಿನಾಂಕ ಜೂನ್ 20 ಸೋಮವಾರದಂದು ಮಧ್ಯಾಹ್ನ 2-30 ಕ್ಕೆ ಶಾಲಾ ಸಭಾಭವನದಲ್ಲಿ ನಡೆಯಲಿದೆ.

ಕಾಪು ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರು, ನಿವೃತ್ತ ಶಿಕ್ಷಕರು, ಪತ್ರಕರ್ತರು ಹಾಗೂ ಖ್ಯಾತ ರೊಟೇರಿಯನ್ ಆದ ಪುಂಡಲೀಕ ಮರಾಠೆ ಇವರು ಉದ್ಘಾಟಕರಾಗಿ ಆಗಮಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನಲ್ ಟ್ರಸ್ಟ್ (ರಿ.) ನ ಅಧ್ಯಕ್ಷರಾದ ಮೋಹನ್ ಕುಮಾರ್ ಬೆಳ್ಳೂರು, ಕಾರ್ಯಾಧ್ಯಕ್ಷರಾದ ಪ್ರಥ್ವಿರಾಜ್ ಆಚಾರ್ಯ ಕಿನ್ನಿಗೋಳಿ, ಪ್ರಧಾನ ಕಾರ್ಯದರ್ಶಿ ಗುರುರಾಜ ಆಚಾರ್ಯ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.