ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ
ಮಾರಿಯಮ್ಮ ಗುಡಿ ಮತ್ತು ಉಚ್ಚಂಗಿ ದೇವಿಯ ಗುಡಿಗಳ ದೇವಿ ದ್ವಾರ ಸ್ಥಾಪನಾ ಧಾರ್ಮಿಕ ಕಾರ್ಯಕ್ರಮಗಳು ಜೂನ್ 17ರಂದು ಸಂಪನ್ನಗೊಂಡಿತು.
ಕ್ಷೇತ್ರದ ಪ್ರಧಾನ ತಂತ್ರಿ ವಿದ್ವಾನ್ ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ನೇತೃತ್ವದಲ್ಲಿ ದೇವಿ ದ್ವಾರ ಸ್ಥಾಪನಾ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು.
ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಿತಿ ಗೌರವಾಧ್ಯಕ್ಷ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೊರಂಗ್ರಪಾಡಿ ದೊಡ್ಡಮನೆ ವಾಸುದೇವ ಶೆಟ್ಟಿ ಕಾಪು , ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ, ರಾಜಶೇಖರ ಕೋಟ್ಯಾನ್, ಅನಿಲ್ ಬಲ್ಲಾಳ್ ಬೀಡು, ಮುಂಬಯಿ ಸಮಿತಿ ಅಧ್ಯಕ್ಷ ಸುಧಾಕರ ಹೆಗ್ಡೆ ತುಂಗಾ, ಮುಂಬೈ ಸಮಿತಿಯ ಉಪಾಧ್ಯಕ್ಷ ಉದ್ಯಮಿ ಕೃಷ್ಣ ವೈ. ಶೆಟ್ಟಿ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ , ಮಾರಿಯಮ್ಮ ದರ್ಶನ ಪಾತ್ರಿ ಗುರುಮೂರ್ತಿ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಮಾಧವ ಆರ್. ಪಾಲನ್, ಮನೋಹರ್ ಎಸ್. ಶೆಟ್ಟಿ ,
ಗಂಗಾಧರ ಸುವರ್ಣ, ಕಟ್ಟಡ ಸಮಿತಿಯ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿ, ಪುರಸಭಾ ವಾರ್ಡ್ಸಂ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ, ಲೀಲಾಧರ ಶೆಟ್ಟಿ, ಶಿಸ್ತು ಪಾಲನ ಸಮಿತಿಯ ಪ್ರಧಾನ ಸಂಚಾಲಕ ಡಾ. ಪ್ರಶಾಂತ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಮತ್ತು ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.