ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹೆಜಮಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು : ಶಾಸಕ ಲಾಲಾಜಿ ಆರ್ ಮೆಂಡನ್

Posted On: 18-06-2022 06:14PM

ಹೆಜಮಾಡಿ : ಇಲ್ಲಿನ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ಈಗಾಗಲೇ 12 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಅನುದಾನವನ್ನು ನೀಡಲಾಗಿದೆ ಹೆಜಮಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಮುಖ್ಯ ರಸ್ತೆಗಳನ್ನು ಮೀನುಗಾರಿಕಾ ರಸ್ತೆಗಳನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್ ಹೇಳಿದರು. ಅವರು ಹೆಜಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿದ ವಿವಿಧ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೆಜಮಾಡಿ ಗ್ರಾಮ ಪಂಚಾಯತ್‌ಗೆ ಜೈ ಹಿಂದ್ ಪ್ರೈವೇಟ್ ಲಿ. ಕಂಪೆನಿಯು ತನ್ನ ಸಿಎಸ್ ಆರ್ ನಿಧಿಯಿಂದ ಕೊಡಮಾಡಲ್ಪಟ್ಟ ಘನ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಚಾಲನೆಯನ್ನು ನೀಡಿದರು.

ಇತ್ತೀಚೆಗೆ ಮೀನುಗಾರಿಕೆಯ ಸಂದರ್ಭ ಮೃತಪಟ್ಟ ಸಂತೋಷ್ ಕುಟುಂಬಸ್ಥರಿಗೆ ಮೀನುಗಾರಿಕಾ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಿಂದ 6 ಲಕ್ಷ ರೂ.ಗಳ ಪರಿಹಾರ ಧನದ ಚೆಕ್‌, ಪಂಚಾಯತ್ ವ್ಯಾಪ್ತಿಯ 94ಸಿ ಹಕ್ಕುಪತ್ರ, ಬಸವ ವಸತಿ ಹಾಗೂ ಅಂಬೇಡ್ಕರ್ ನಿಗಮದ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮನೆ ಮಂಜೂರಾತಿಯ ಮಂಜೂರಾತಿ ಪತ್ರವನ್ನು, ಪ್ರಾಕೃತಿಕ ವಿಕೋಪ ನಿಧಿ ಚೆಕ್, ವೃದ್ಧಾಪ್ಯ ವೇತನಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ ಗಿರೀಶ್, ಪಡುಬಿದ್ರಿ ಪೊಲೀಸ್‌ ಉಪನಿರೀಕ್ಷಕ ಪುರುಷೋತ್ತಮ, ಜಲ ಜೀವನ್ ಮಿಷನ್ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಿರೀಶ್ ಶೇಟ್, ಕಂದಾಯ ನಿರೀಕ್ಷಕ ಸುಧೀರ್ ‌ ಕುಮಾರ್ ಶೆಟ್ಟಿ, ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ದಿವಾಕರ್ ಖಾರ್ವಿ, ಜಿಲ್ಲಾಪಂಚಾಯತ್ ಸಹಾಯಕ ಇಂಜಿನಿಯರ್ ಸುನಿಲ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮತಿ, ತೋಟಗಾರಿಕೆ ಇಲಾಖೆ ಅಧಿಕಾರಿ ಅಮಿತ್ ಸಿಂಪಿ, ಕೃಷಿ ಇಲಾಖೆ ಅಧಿಕಾರಿ ಶೇಖರ್, ಪಡುಬಿದ್ರಿ ಎಸ್ ಸಿ ಝಡ್ ಜನರಲ್ ಮೆನೇಜ‌ರ್ ಅಶೋಕ್‌ ಶೆಟ್ಟಿ, ಗ್ರಾಮ ಲೆಕ್ಕಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.