ಜೂನ್ 26 : ಪಡುಬಿದ್ರಿ ಗ್ರಾಮೀಣ ಕಾಂಗ್ರೇಸ್ ವತಿಯಿಂದ ಚಿಂತನ ಮಂಥನ ಸಭೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ
Posted On:
21-06-2022 08:04PM
ಪಡುಬಿದ್ರಿ : ಗ್ರಾಮೀಣ ಕಾಂಗ್ರೇಸ್ ಸಮಿತಿ, ಪಡುಬಿದ್ರಿ ಇದರ ವತಿಯಿಂದ ಚಿಂತನ ಮಂಥನ ಸಭೆ ಜೂನ್ 26, ಆದಿತ್ಯವಾರದಂದು ಸಂಜೆ 4.30ಕ್ಕೆ ಸಾಯಿ ಆರ್ಕೇಡ್ ಸಭಾಂಗಣ, 3ನೇ ಮಹಡಿ ಮಾರ್ಕೇಟ್ ರಸ್ತೆ, ಪಡುಬಿದ್ರಿ ಇಲ್ಲಿ ಜರಗಲಿದೆ.
ಈ ಸಂದರ್ಭ ಸಾಧಕರಿಗೆ ಸನ್ಮಾನ, ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯೊಳಗೆ ವಾಸ್ತವ್ಯವಿರುವ 2021-22ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ 550ಕ್ಕೂ ಮೇಲ್ಪಟ್ಟು ಅಂಕಗಳಿಸಿದವರಿಗೆ ಪ್ರತಿಭಾ ಪುರಸ್ಕಾರ, ಪಕ್ಷದ ಹಿರಿಯ ಮುಖಂಡರಿಗೆ ಸನ್ಮಾನ, ಪಕ್ಷದ ಸಂಘಟನಾತ್ಮಕ ಕಾರ್ಯದ ಬಗ್ಗೆ ಚಿಂತನ ಮಂಥನ,
ಪಕ್ಷದ ಮಾಜಿ ಹಿರಿಯ ಗ್ರಾ.ಪಂ. ಸದಸ್ಯರು, ಅಧ್ಯಕ್ಷರುಗಳಿಗೆ ಗೌರವ ಸನ್ಮಾನ ಕಾರ್ಯಕ್ರಮ ಜರಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಗ್ರಾಮೀಣ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ಕರುಣಾಕರ್ ಪೂಜಾರಿ ವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಕಟನೆ : ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯೊಳಗೆ ವಾಸ್ತವ್ಯವಿರುವ 2021-22ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ(ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ) 550ಕ್ಕೂ ಮೇಲ್ಪಟ್ಟು ಅಂಕಗಳಿಸಿದವರು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವವರು ಜೂನ್ 24ರ ಮೊದಲು ಈ ಕೆಳಗಿನ ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಿ
ಗಣೇಶ್ ಕೋಟ್ಯಾನ್ : 9900555542
ತಸ್ನಿನ್ ಅರಾ : 8861183491