ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ನಲ್ಲಿ ಯೋಗ ದಿನಾಚರಣೆ

Posted On: 22-06-2022 06:04PM

ಕಾಪು : ಆನೆಗುಂದಿ ಶ್ರೀ ಸರಸ್ವತಿ ಎಜುಕೇಷನಲ್ ಟ್ರಸ್ಟ್ - ಅಸೆಟ್ ನ ಅಧೀನದಲ್ಲಿರುವ ಆನೆಗುಂದಿ ಸರಸ್ವತಿ ಪೀಠ ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಿರ್ವದ ಪತಂಜಲಿ ಯೋಗ ಸಮಿತಿಯ ಸದಸ್ಯರಾದ ರಮೇಶ್ ಸಾಲಿಯಾನ್ ಹಾಗೂ ಪ್ರಭಾಕರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಯೋಗ ಮತ್ತು ಪ್ರಾಣಾಯಾಮದ ಮಹತ್ವವನ್ನು ಆಸನಗಳ ಪ್ರದರ್ಶನದ ಮೂಲಕ ವಿವರಿಸಿದರು. ವಿದ್ಯಾರ್ಥಿಗಳು ಅತ್ಯಂತ ಸಂಭ್ರಮದಿಂದ ಆಸನಗಳನ್ನು ಮಾಡಿದರು.

ಪ್ರಾಂಶುಪಾಲ ಗುರುದತ್ತ ಸೋಮಯಾಜಿ ಅಂತಾರಾಷ್ಟ್ರೀಯ ಯೋಗ ದಿನದ ಮಹತ್ವ ತಿಳಿಸಿದರು. ನಿಕಟಪೂರ್ವ ಅಧ್ಯಕ್ಷ ವಿದ್ವಾನ್ ಶಂಭುದಾಸ್ ಗುರೂಜಿ, ಶಿಕ್ಷಕಿ ರಜೀಶ್ಮಾ ಸಹಕರಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ , ಕನ್ನಡ ಅಧ್ಯಾಪಕ ಮಂಜುನಾಥ್ ಶೇಟ್ ಮತ್ತು ಶಿಕ್ಷಕವೃಂದದವರು ಪಾಲ್ಗೊಂಡಿದ್ದರು.