ಉಡುಪಿ : ಪೆರ್ಡೂರು ಮೆಸ್ಕಾಂ ವ್ಯಾಪ್ತಿಯ ಬೆಳ್ಳರ್ಪಾಡಿ, 41ನೇ ಶಿರೂರು ಹಾಗೂ ಬೈರಂಪಲ್ಲಿ ಯಲ್ಲಿ ಅನಿಯಮಿತ ವಿದ್ಯುತ್ ಕಡಿತವನ್ನು ವಿರೋಧಿಸಿ ಬೈರಂಪಲ್ಲಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಪೆರ್ಡೂರು ಮೆಸ್ಕಾಂ ಕಚೇರಿಗೆ ತೆರಳಿ ಪೆರ್ಡೂರು ವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಮೆಸ್ಕಾಂ ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಫೋನ್ ಸಂಭಾಷಣೆ ಮುಖಾಂತರ ಮಾತನಾಡಿ ಇನ್ನು ಇದೇ ರೀತಿ ಮುಂದುವರೆದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಲಾಯಿತು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಲಾಲ್ ಪಕ್ಕಲೂ, ಬೈರಂಪಲ್ಲಿ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಸಾಂತ್ಯಾರು, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಮರ್ ಕುಲಾಲ್ ಬೈರಂಪಲ್ಲಿ, ಕಾಪು ಉತ್ತರ ವಲಯದ ಸಾಮಾಜಿಕ ಜಾಲತಾಣ ಅಧ್ಯಕ್ಷರಾದ ನಿತಿನ್ ಕುಮಾರ್ ಶೆಟ್ಟಿ ಬೆಳ್ಳರ್ಪಾಡಿ, ಬೈರಂಪಳ್ಳಿಯುವ ಕಾಂಗ್ರೆಸ್ ಅಧ್ಯಕ್ಷರಾದ ಗಣೇಶ್ ಕುಲಾಲ್ ಕಾಂಗ್ರೆಸ್ ಮುಖಂಡರುಗಳಾದ ಉದಯಕುಮಾರ್, ಕೃಷ್ಣನಂದ ನಾಯಕ್ ಹಾಗೂ ಇನ್ನಿತರ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.