ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಕುಲಾಲ ಸಂಘದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಆಯ್ಕೆ

Posted On: 27-06-2022 09:16PM

ಕಾಪು : ಇಲ್ಲಿನ ಕುಲಾಲ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚಿಗೆ ಸಂಘದ ಕಚೇರಿಯಲ್ಲಿ ಜರಗಿತು. ಸಂಘದ ಮುಂದಿನ ಕಾರ್ಯ ಅವಧಿಗೆ ಸಂದೀಪ್ ಬಂಗೇರ ಶಂಕರಪುರ ಅಧ್ಯಕ್ಷರಾಗಿ ಮರು ಆಯ್ಕೆಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಮೂಲ್ಯ ಎಲ್ಲೂರು ಆಯ್ಕೆಯಾಗಿದ್ದಾರೆ.

ಈ ಹಿಂದೆ ಇದ್ದ ಕಾರ್ಯಕಾರಿಣಿ ಸಮಿತಿಯನ್ನು ಮುಂದುವರೆಸುವುದೆಂದು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಕಾಪು ಕುಲಾಲ ಸಂಘ ಪ್ರಕಟನೆಯಲ್ಲಿ ತಿಳಿಸಿದೆ.