ಯಾಕೋ ಬಹಳ ದಿನಗಳ ನಂತರ ನಮ್ಮೂರಿನ ಪ್ರತಿಭೆಯನ್ನು ಗುರುತಿಸೋಣ ಅಂತ ಅನಿಸ್ತು ಅದಕ್ಕಾಗಿ ನಾನಿವತ್ತು ಒಂದು ಪ್ರತಿಭೆಯ ಬಗ್ಗೆ ಬರೆಯಲಿಕ್ಕೆ ಹೊರಟಿದ್ದೇನೆ.
ಅಂದಹಾಗೆ ಈ ಪ್ರತಿಭೆಯ ಬಗ್ಗೆ ಕೆಲವರು ಕೇಳಿರಬಹುದು ಇನ್ನು ಕೆಲವರು ಕೇಳದೆ ಇರಬಹುದು.
ಇತ್ತೀಚಿನ ದಿನಗಳಲ್ಲಿ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡುತ್ತಿರುವ ನಮ್ಮೂರಿನ ಹೆಮ್ಮೆಯ ಪ್ರತಿಭೆ ಕಾವ್ಯ ಅಂಚನ್ ಕಾಪು.
ದಿವಂಗತ ವಿಜಯ ಬಿ ಅಂಚನ್ ಮತ್ತು ಶಕುಂತಲಾ ವಿ ಅಂಚನ್ ದಂಪತಿಗಳ ಎರಡು ಪುತ್ರಿಯರಲ್ಲಿ ಕಾವ್ಯ ಅಂಚನ್ ಮೊದಲಿಗರು ಹಾಗೂ ವೃಂದ ಅಂಚನ್ ಎರಡನೆಯವರು, ಇವರು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಕಾವ್ಯ ಅಂಚನ್ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ದಂಡತೀರ್ಥ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆ ಉಳಿಯಾರಗೋಳಿ ಕಾಪು ಮತ್ತು ಪ್ರೌಢಶಿಕ್ಷಣವನ್ನು ವಿದ್ಯಾವರ್ಧಕ ಪ್ರೌಢಶಾಲೆ ಪಾಂಗಾಳ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಇಲ್ಲಿ ಪೂರ್ಣಗೊಳಿಸಿದರು.
ಪ್ರಸ್ತುತ ಕೆನರಾ ಕಾಲೇಜು ಮಂಗಳೂರು ಇಲ್ಲಿ ಉನ್ನತ ಮಟ್ಟದ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ.
ಕಾವ್ಯ ಅಂಚನ್ ಇವರು ಇದುವರೆಗೂ ಅನೇಕ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.
ಅವರು ಪಡೆದ ಪ್ರಶಸ್ತಿಗಳು..
ಸುದೀಕ್ಷಾ ಕಿರಣ್ ಸುವರ್ಣ ಇವರು ನಡೆಸಿದ, ಬಿರುವೆರ್ ಕುಡ್ಲ ಹಾಗೂ ಎನ್, ಬಿ ಮಾಡೆಲ್ ಮ್ಯಾನೇಜ್ಮೆಂಟ್ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರಿನಲ್ಲಿ ನಡೆದ ಮಿಸ್ ಬಿಲ್ಲವ 2019 ವಿಜೇತೆ.
ಮಿಸ್ ಕರ್ನಾಟಕ ಇಂಟರ್ನ್ಯಾಷನಲ್ ಫಸ್ಟ್ ರನ್ನರ್,
ಬೆಂಗಳೂರಿನಲ್ಲಿ ವಿಜಯಕರ್ನಾಟಕದ ನೇತೃತ್ವದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದು ಕರ್ನಾಟಕದ ಎಲ್ಲಾ ಜಿಲ್ಲೆಗಳ ಒಟ್ಟು 36 ಸ್ಪರ್ಧಿಗಳನ್ನು ಆಯ್ಕೆ ಮಾಡಿದ್ದರು, ಆಯ್ಕೆಯಾದ 36 ಸ್ಪರ್ಧಿಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲು ಕಾವ್ಯ ಅಂಚನ್ ಕೂಡ ಒಬ್ಬರಾಗಿದ್ದರು, ಸ್ಪರ್ಧೆಯ ದ್ವಿತೀಯ ಬಹುಮಾನವನ್ನು ಸ್ಯಾಂಡಲ್ವುಡ್ ಸ್ಟಾರ್ ನಟರಾದ ಶ್ರೀಮುರಳಿ, ರಿಷಬ್ ಶೆಟ್ಟಿ, ಅನುಪ್ ಭಂಡಾರಿ, ಹಾಗೂ ರಾಗಿಣಿ ಇವರಿಂದ ವಿಜಯ ಕರ್ನಾಟಕ ನವತಾರೆ ಕಿರೀಟವನ್ನು ತನ್ನದಾಗಿಸಿಕೊಂಡಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಗ್ರಾವಿಟಿ ಡ್ಯಾನ್ಸ್ ಕ್ರಿವ್ ಕಾಪು ಇದರ ಸದಸ್ಯೆಯಾಗಿದ್ದು ಹತ್ತು ಹಲವಾರು ಕಡೆಗಳಲ್ಲಿ ನಡೆದ ನೃತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
ಡೆಲ್ಲಿ, ಬೆಂಗಳೂರು, ಶಿವಮೊಗ್ಗ ಸೇರಿದಂತೆ ಇನ್ನೂ ಅನೇಕ ಕಡೆಗಳಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದ್ದಾರೆ.
ನೃತ್ಯ ಮತ್ತು ಮಾಡೆಲಿಂಗ್ ಕ್ಷೇತ್ರದಲ್ಲಿ ಸೈ ಎನಿಸಿಕೊಂಡಿರುವ ಇವರು ನೃತ್ಯ ನಿರ್ದೇಶನವನ್ನು ಕೂಡ ಮಾಡುತ್ತಾರೆ. ಕಳೆದ ಐದಾರು ವರ್ಷಗಳಿಂದ ಹಲವಾರು ಶಾಲೆಯ ಮಕ್ಕಳಿಗೆ ನೃತ್ಯ ತರಬೇತಿ ಮತ್ತು ನೃತ್ಯ ನಿರ್ದೇಶನವನ್ನು ಮಾಡುತ್ತಿದ್ದಾರೆ.
ಕಾಪು ಹೊಸ ಮಾರಿಗುಡಿ ಹತ್ತಿರದಲ್ಲಿ ಇವರ ಮನೆ ಇರುವುದರಿಂದ, ಕಾಪು ಮಾರಿಯಮ್ಮನನ್ನು ಆರಾಧ್ಯ ದೇವರಾಗಿ ಪೂಜಿಸುತ್ತಾರೆ,
ಇನ್ನು ಯಾವುದೇ ಕೆಲಸ ಮಾಡಬೇಕಾದರೂ ಮೊದಲು ಕೊರಗಜ್ಜನಿಗೆ ಭಕ್ತಿಯಿಂದ ಕೈ ಮುಗಿಯುತ್ತಾರೆ, ಕುಲದೇವರಾದ ಬೆರ್ಮೆರ್ ಬೈದೆರ್ಲು ಆಶೀರ್ವಾದವು ಸದಾ ಅವರ ಮೇಲಿದೆ ಅನ್ನುತ್ತಾರೆ..
ಇನ್ನು ಇವರು ಮಾಡಿರುವ ಸಾಧನೆ ಬಗ್ಗೆ ಕೇಳಿದರೆ, ಗುರುಹಿರಿಯರ ದೈವ-ದೇವರ ಭಯಭಕ್ತಿಯಿಂದ ಮತ್ತು ನಾವು ಮಾಡುವ ಸತತ ಪ್ರಯತ್ನದಿಂದ ಎಲ್ಲವೂ ಸಾಧ್ಯ ಅನ್ನುತ್ತಾರೆ,
ದೈವ ದೇವರ ಅನುಗ್ರಹದಿಂದ ಗುರು-ಹಿರಿಯರ ಆಶೀರ್ವಾದದಿಂದ ಮಾಡೆಲಿಂಗ್ ಕ್ಷೇತ್ರದಲ್ಲಿ ಇನ್ನಷ್ಟು ಎತ್ತರ ಬೆಳೆಯಲಿ ಎಂದು ಆಶಿಸುತ್ತೇನೆ.
ಬರಹ : ✍ ವಿಕ್ಕಿ ಪೂಜಾರಿ ಮಡುಂಬು