ಕೊರೊನಾ ಸೋಂಕಿತ ಜಿಲ್ಲಾ ಪಂಚಾಯತ್ ಸಿಬ್ಬಂದಿ ಕಟಪಾಡಿಯ ಸೆಲೂನ್ ಗೆ ಹೋಗಿದ್ದರಿಂದ ಸಾರ್ವಜನಿಕರು ಆತಂಕಗೊಂಡ ಹಿನ್ನಲೆಯಲ್ಲಿ ಕಾಪು ವಲಯದ ಸೆಲೂನ್ ಗಳು ಮೇ 26 ರಂದು ಬಂದ್ ಮಾಡಲಾಗಿತ್ತು ಮತ್ತೆ ವೈದ್ಯರ ಸಲಹೆಯ ಮೇರೆಗೆ ಮೇ 27ರಿಂದ ತೆರಯಲು ನಿರ್ಧರಿಸಿದ್ದಾರೆ
ಕೊರೊನಾ ಸೋಂಕಿತಾ ಜಿಲ್ಲಾ ಪಂಚಾಯತ್ ಸಿಬ್ಬಂದಿ ಕಟಪಾಡಿಯ ಸೆಲೂನ್ ಒಂದರ ಸಂಪರ್ಕಕ್ಕೆ ಬಂದಿದ್ದು ಸಾರ್ವಜನಿಕರು ಆತಂಕ ಗೊಂಡಿದ್ದರು. ಈ ಹಿನ್ನೆಲೆ ಸೆಲೂನ್ ಗಳನ್ನು ಬಂದ್ ಮಾಡಲು ಕಾಪು ಸವಿತಾ ಸಮಾಜ ನಿರ್ಧರಿಸಿತ್ತು. ನಿನ್ನೆ ಸಂಜೆ ಸಭೆ ನಡೆಸಿ ಸೆಲೂನ್ ಗಳನ್ನು ಬಂದ್ ಮಾಡಲು ತೀರ್ಮಾನಿಸಿದ್ದರು. ಇಂದು ಕಾಪು ತಾಲೂಕಿನ ಎಲ್ಲ ಸೆಲೂನ್ ಗಳನ್ನು ಬಂದ್ ಮಾಡಿದ್ದು ಈ ಕುರಿತು ವೈದ್ಯರ ಸಲಹೆಯ ಮೇರೆಗೆ ಸವಿತಾ ಸಮಾಜದ ಮುಖಂಡರು ಸೆಲೂನ್ ಗಳನ್ನು ಮತ್ತೆ ತೆರೆಯಲು ತೀರ್ಮಾನಿಸಿದ್ದಾರೆ