ಉಡುಪಿ : ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗರೂಕತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ - ಜುಲೈ 1ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶಿಸಿದ್ದಾರೆ.
ಜುಲೈ 1 ರಿಂದ 4 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ,ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 30 ಮತ್ತು ಜುಲೈ ಒಂದರಂದು ಆರೆಂಜ್ ಅಲರ್ಟ್ ಜೂನ್ 2 ರಿಂದ ಜೂನ್ ನಾಲ್ಕರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.