ಮಂಗಳೂರು : ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆ ಯಲ್ಲಿ ಈ ಹಿಂದೆ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ ಉಪಯೋಗಿಸುತ್ತಿದ್ದ ದೋಣಿಯನ್ನು ಪ್ರವಾಹದ ಕಾರಣ ದಡಕ್ಕೆ ಮೇಲೆತ್ತುವಾಗ ನೀರಿನ ರಭಸಕ್ಕೆ ದೋಣಿ ಸಮೇತ ಕೊಚ್ಚಿಹೋಗಿ ಇಬ್ಬರು ಪಾರಾದರೆ, ವ್ಯಕ್ತಿಯೋರ್ವನು ಕೊಚ್ಚಿಹೋದ ಘಟನೆ ಅಡ್ಯಾರ್-ಪಾವೂರು ಬ್ರಿಡ್ಜಿನ ಸಮೀಪ ನಡೆದಿದೆ.
ನೇತ್ರಾವತಿ ನದಿಯಲ್ಲಿ ವಿಪರೀತ ನೀರು ಇದ್ದು, ಉತ್ತರ ಪ್ರದೇಶ ಮೂಲದವರಾದ ರಾಜು ಸಾಹ್, ಮೊಂತು ಸಾಹ್ ಮತ್ತು ನಾಗೇಂದ್ರ ಕುಮಾರ್ ಸಾಯನಿ ಎಂಬವರುಗಳು ದೋಣಿ ಸಮೇತ ನದಿಯ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುತ್ತಾರೆ. ಅದರಲ್ಲಿ ಅಡ್ಯಾರ್-ಪಾವೂರು ಬ್ರಿಡ್ಜಿನ ಅಡಿಯಲ್ಲಿ ಮೊಂತು ಸಾಹ್ ಮತ್ತು ನಾಗೇಂದ್ರ ಕುಮಾರ್ ರವರು ಈಜಿ ದಡ ಸೇರಿದ್ದು, ರಾಜು ಸಾಹ್ ಎಂಬವರು ನೀರಿನ ರಭಸಕ್ಕೆ ನಾಪತ್ತೆಯಾಗಿರುತ್ತಾರೆ. ಆಸಿಫ್ & ಇಸಾಕ್ ಎಂಬವರು ದೋಣಿಯ ಮಾಲಕರಾಗಿರುತ್ತಾರೆ.